ಯೋಗಿ ರಾಜ್ಯದಲ್ಲಿ ವರದಕ್ಷಿಣೆ ದೌರ್ಜನ್ಯ | ಒಂದೇ ವಾರದಲ್ಲಿ ಇಬ್ಬರು ಮಹಿಳೆಯರಿಗೆ ಬೆಂಕಿ ಹಚ್ಚಿ ಕ್ರೌರ್ಯ

Date:

Advertisements

ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ಒಂದೇ ವಾರದಲ್ಲಿ ವರದಕ್ಷಿಣೆ ಕಿರುಕುಳದಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಭಾಟಿಯ ಅವರನ್ನು ಮೂರು ದಿನಗಳ ಹಿಂದೆ ಆಕೆಯ ಪತಿ ಮತ್ತು ಕುಟುಂಬಸ್ಥರು ಭೀಕರವಾಗಿ ಕೊಲೆ ಮಾಡಿದ್ದರು. ಮಂಗಳವಾರ, ಅಮ್ರೋಹಾ ಜಿಲ್ಲೆಯ ಪಾರುಲ್ (32) ಎಂಬ ಮಹಿಳೆಗೆ ವರದಕ್ಷಿಣೆಯ ಕಾರಣಕ್ಕಾಗಿ ಆಕೆಯ ಪತಿ ಮತ್ತು ಕುಟುಂಬಸ್ಥರು ಬೆಂಕಿ ಹಚ್ಚಿದ್ದಾರೆ. ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿರುವ ಪಾರುಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆರೋಪಿ ಪತಿ ಪೊಲೀಸ್‌ ಇಲಾಖೆಯಲ್ಲಿ ಕಾನ್‌ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಅಮ್ರೋಹಾ ಜಿಲ್ಲೆಯ ನರಂಗ್‌ಪುರ ಗ್ರಾಮದ ನಿವಾಸಿಯಾದ ಪಾರುಲ್ ಅವರು ಕಾನ್‌ಸ್ಟೇಬಲ್ ಆಗಿರುವ ದೇವೇಂದ್ರ ಅವರನ್ನು 2016ರಲ್ಲಿ ವಿವಾಹವಾಗಿದ್ದರು. ಇಬ್ಬರು ರಾಮ್‌ಪುರದಲ್ಲಿ ವಾಸವಾಗಿದ್ದರು. ಇತ್ತೀಚೆಗೆ, ದೇವೇಂದ್ರ ಅವರು ಬರೇಲಿಗೆ ವರ್ಗಾವಣೆಗೊಂಡಿದ್ದರು. ರಜೆ ಮೇಲೆ ದಂಪತಿಗಳು ನರಂಗ್‌ಪುರ ಗ್ರಾಮಕ್ಕೆ ಬಂದಿದ್ದರು. ಈ ವೇಳೆ, ಮದುವೆ ಸಮಯದಲ್ಲಿ ನಡೆದಿದ್ದ ವರದಕ್ಷಿಣೆ ಮಾತುಕತೆಯಂತೆ ವರದಕ್ಷಿಣೆಯನ್ನು ಸಂಪೂರ್ಣವಾಗಿ ನೀಡದ ವಿಚಾರವಾಗಿ ಜಗಳ ನಡೆದಿದೆ. ಪಾರುಲ್ ಅವರನ್ನು ಜೀವಂತವಾಗಿ ಸುಟ್ಟು ಹಾಕಲು ದೇವೇಂದ್ರ ಮತ್ತು ಅವರ ಇತರ ಐವರು ಕುಟುಂಬಸ್ಥರು ಯತ್ನಿಸಿದ್ದಾರೆ. ಪಾರುಲ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾರುಲ್ ಅವರ ಸಹೋದರ ದೇವೇಂದ್ರ ಸೇರಿದಂತೆ ಆರು ಮಂದಿ ವಿರುದ್ಧ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ದೇವೇಂದ್ರ, ಆತನ ತಾಯಿ ಸೋನು, ಗಜೇಶ್, ಜಿತೇಂದ್ರ ಹಾಗೂ ಸಂತೋಷ್ ಸೇರಿದಂತೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಅವರಿಗಾಗಿ ಹುಟುಕಾಟ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

“ಮಂಗಳವಾರ ಬೆಳಗ್ಗೆ ನೆರೆಹೊರೆಯವರು ನಮಗೆ ಮಾಹಿತಿ ನೀಡಿದರು. ನಾವು ಸ್ಥಳಕ್ಕೆ ಧಾವಿಸಿದಾಗ, ಪಾರುಲ್‌ ನೋವಿನಿಂದ ನರಳುತ್ತಿದ್ದಳು. ಆಕೆಗೆ ತೀವ್ರ ಸುಟ್ಟ ಗಾಯಗಳಾಗಿವೆ. ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು, ಪ್ರಥಮ ಚಿಕಿತ್ಸೆ ಕೊಡಿಸಿ, ದೆಹಲಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಕೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ” ಎಂದು ಪಾರುಲ್‌ ತಾಯಿ ಅನಿತಾ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ, ನೋಯ್ಡಾದಲ್ಲಿ ನಿಕ್ಕಿ ಭಾಟಿ ಅವರನ್ನು ಆಕೆಯ ಪತಿ ವಿಪಿನ್ ಮತ್ತು ಅತ್ತೆ ಮಾವಂದಿರು ಬೆಂಕಿ ಹಚ್ಚಿ ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ವಿವಾಹದ ಸಮಯದಲ್ಲಿ ನಿಕ್ಕಿ ಅವರ ಪೋಷಕರು ವಿಪಿನ್‌ಗೆ ವರದಕ್ಷಿಣೆಯಾಗಿ ಸ್ಕಾರ್ಪಿಯೋ ಎಸ್‌ಯುವಿ, ಮೋಟಾರ್‌ಸೈಕಲ್ ಹಾಗೂ ಆಭರಣಗಳನ್ನು ನೀಡಿದ್ದರೂ, ಹೆಚ್ಚಿನ ವರದಕ್ಷಿಣೆಗೆ ವಿಪಿನ್ ಮತ್ತು ಪೋಷಕರು ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆಯಂತೆ 36 ಲಕ್ಷ ರೂ. ಹಣವನ್ನು ನೀಡಲಾಗದ ಕಾರಣಕ್ಕೆ ನಿಕ್ಕಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಆಕೆಗೆ ಬೆಂಕಿ ಹಚ್ಚಿ, ಘಟನೆಯನ್ನು ವಿಪಿನ್ ವಿಡಿಯೋ ಮಾಡಿಕೊಂಡಿದ್ದನೆಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ವರದಿಯಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗಮನಿಸಿ: ವರದಕ್ಷಿಣೆ ಎಂಬುದು ಭಾರತೀಯ ಸಮಾಜದಲ್ಲಿ ಆಳವಾಗಿ ಬೇರೂರಿರುವ ಸಾಮಾಜಿಕ ಪಿಡುಗು – ಕ್ರೌರ್ಯ. ಮದುವೆಯ ಸಮಯದಲ್ಲಿ ವಧುವಿನ ಕುಟುಂಬವು ವರನಿಗೆ ವರದಕ್ಷಿಣೆ ನೀಡಬೇಕೆಂಬುದು ಸಾಮಾಜಿಕ ನಿಯಮವಾಗಿಬಿಟ್ಟಿದೆ. ವರದಕ್ಷಿಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ ಮತ್ತು ತಾರತಮ್ಯಗಳು ನಡೆಯುತ್ತಿವೆ. ವರದಕ್ಷಿಣೆ ಪಡೆಯುವ ಮತ್ತು ಕೊಡುವುದರ ವಿರುದ್ಧ ಹಲವು ಕಾನೂನುಗಳಿದ್ದರೂ, ಈ ಪಿಡುಗನ್ನು ತೊಡೆದುಹಾಕಲಾಗಿಲ್ಲ. ವರದಕ್ಷಿಣೆ ವಿರುದ್ಧ ಅರಿವು ಬೆಳೆಸಿಕೊಳ್ಳುವುದು, ದನಿ ಎತ್ತುವುದು ಕೇವಲ ಹೆಣ್ಣು ಮಕ್ಕಳ ವಿಚಾರವಲ್ಲ. ಗಂಡು ಜಾತಿಯ ಕರ್ತವ್ಯವೂ ಆಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X