ಗಣೇಶ ಮೂರ್ತಿಗಳ ವಿಸರ್ಜನೆ | 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ ಕಲ್ಪಿಸಿದ ಬಿಬಿಎಂಪಿ

Date:

Advertisements

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ತಾತ್ಕಾಲಿಕ ಕಲ್ಯಾಣಿಗಳು ಹಾಗೂ 489 ತಾತ್ಕಾಲಿಕ ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಎಲ್ಲಾ ವಾರ್ಡ್‌ಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರಾದ ಎಂ. ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ಸಹ ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಬಿಬಿಎಂಪಿ ವೆಬ್ ಸೈಟ್ ಲಿಂಕ್ https://apps.bbmpgov.in/ganesh2025/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಪ್ರತಿ ವರ್ಷದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆರೆಗಳಾದ ಸ್ಯಾಂಕಿಕೆರೆ, ಹಲಸೂರು ಕರೆ, ಯಡಿಯೂರು ಕೆರೆ ಹಾಗೂ ಹೆಬ್ಬಾಳ ಕೆರೆ ಹಾಗೂ ಇತರೆ ಕೆರೆಗಳ ಅಂಗಳದಲ್ಲಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಲ್ಯಾಣಿಗಳ ಆವರಣದಲ್ಲಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್‌ಗಳ ಅಳವಡಿಕೆ, ನುರಿತ ಈಜುಗಾರರ/ಜೀವ ರಕ್ಷಕರ ನಿಯೋಜನೆ, ಸಿಸಿಟಿವಿ ಅಳವಡಿಕೆ, ವಿದ್ಯುತ್ ದೀಪಗಳ ಸೌಲಭ್ಯ ಹಾಗೂ ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇನ್ನು ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆ ಮಾಡಿದ ವೇಳೆ ಸಂಗ್ರಹವಾಗುವ ತ್ಯಾಜ್ಯವನ್ನು ಆಟೋ ಟಿಪ್ಪರ್ ಗಳ ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

WhatsApp Image 2025 08 26 at 7.59.23 PM

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪೈಕಿ ದಿನಾಂಕ: 27-08-2025 ರಿಂದ 07-09-2025 ರವರೆಗೆ ಸಾರ್ವಜನಿಕರು ಪರಿಸರ ಸ್ನೇಹಿ ಅಥವಾ ಮಣ್ಣಿನಿಂದ ಮಾಡಿರುವ ಗಣೇಶ ಮೂರ್ತಿಗಳನ್ನು ಯಡಿಯೂರು ಕೆರೆಯಲ್ಲಿ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹಲಸೂರು ಕೆರೆ ಅಂಗಳದ ಕಲ್ಯಾಣಿ:
ಹಲಸೂರು ಕೆರೆಯ ಕಲ್ಯಾಣಿಯಲ್ಲಿ 27-08-2025 ರಿಂದ 30-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಹೂಳೆತ್ತುವ ಕಾರ್ಯವನ್ನು 01-09-2025, 02-09-2025, 08-09-2025 ಹಾಗೂ 09-09-2025 ರಂದು ನಿರ್ವಹಿಸುವ ಕಾರಣ ಯಾವುದೇ ರೀತಿಯ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ.

ಇದನ್ನು ಓದಿದ್ದೀರಾ? ಮಾಲ್, ಸಿಂಗಲ್ ಸ್ಕ್ರೀನ್, ಮುಂಗಡ ಬುಕಿಂಗ್ ಆ್ಯಪ್ ಎಂಬ ಅಧಿಕೃತ ಕಳ್ಳರ ಕೂಟಗಳು

ಹೆಬ್ಬಾಳ‌ ಕೆರೆ ಅಂಗಳದ ಕಲ್ಯಾಣಿ
ಹೆಬ್ಬಾಳ‌ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ 10-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿ:
ಸ್ಯಾಂಕಿ ಕೆರೆ ಅಂಗಳದ ಕಲ್ಯಾಣಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 04-09-2025 ರವರೆಗೆ ಪರಿಸರ ಸ್ನೇಹಿ ಮೂರ್ತಿಗಳನ್ನು ಮಾತ್ರ ವಿಸರ್ಜನೆ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X