ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

Date:

Advertisements

ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಿಷೇಧಿಸಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಎನ್ ಶಶಿಕುಮಾರ ಆಜ್ಞೆ ಹೊರಡಿಸಿದ್ದಾರೆ.

ಈ ಕುರಿತು ಆದೇಶಿಸಿರುವ ಅವರು, “ಹುಬ್ಬಳ್ಳಿ-ಧಾರವಾಡದಲ್ಲಿ ಆಗಸ್ಟ್‌ 26ರ ರಾತ್ರಿ 11.59ರಿಂದ 28ರ ಬೆಳಿಗ್ಗೆ 6ರವರೆಗೆ ಮತ್ತು 30ರ ರಾತ್ರಿ 11.59ರಿಂದ ಸೆಪ್ಟೆಂಬರ್‌ 1ರ ಬೆಳಿಗ್ಗೆ 6ರವರೆಗೆ, ಸೆ.1ರ ರಾತ್ರಿ 11.59ರಿಂದ ಸೆ.3ರ ಬೆಳಿಗ್ಗೆ 6ರವರಗೆ ಹಾಗೂ ಸೆ.3ರ ರಾತ್ರಿ 11.59ರಿಂದ ಸೆ.7ರ ಬೆಳಿಗ್ಗೆ 6ರವರಗೆ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಆದೇಶಿಸಿದ್ದಾರೆ.

ಈ ದಿನಾಂಕಗಳಂದು ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಿಯರ್ ಬಾರ್‌ಗಗಳು, ಕ್ಲಬ್‍ಗಳು ಮತ್ತು ಹೊಟೇಲ್‍ಗಳಲ್ಲಿ ಮದ್ಯ ಮರಾಟ, ಮದ್ಯ ಸಾಗಾಟ ಮತ್ತು ಮದ್ಯ ಸೇವೆನೆಯನ್ನು ನಿಷೇಧಿಸಿ, ಮದ್ಯದ ಅಂಗಡಿಗಳು, ಹೊಟೇಲ್‍ಗಳಲ್ಲಿರುವ ಬಾರ್‌ಗಳನ್ನು ಈ ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಮುಚ್ಚಿಸಬೇಕು. ಇದಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ಬರುವ ಹಿತದೃಷ್ಟಿಯಿಂದ ವಲಯ ಅಬಕಾರಿ ಇನ್‌ಸ್ಪೆಕ್ಟರ್ ಹಾಗೂ ಉಪವಿಭಾಗ ಅಬಕಾರಿ ಅಧೀಕ್ಷಕರು ಕರ್ನಾಟಕ ಅಬಕಾರಿ ಕಾಯ್ದೆ- 1965ರ ಕಲಂ 21(2)ರ ಅನ್ವಯ ಅವಶ್ಯಕತೆ ಕಂಡುಬಂದಲ್ಲಿ, ಶಾಂತಿ ಪಾಲನೆಗಾಗಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ | ಕೋಮು ದ್ವೇಷದ ಹೇಳಿಕೆ; ವಸಂತ್ ಗಿಳಿಯಾರ್ ವಿರುದ್ಧ ದೂರು ದಾಖಲು

ಧಾರವಾಡ ಅಬಕಾರಿ ಉಪ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಡಿಸಿಪಿ(ಕಾ.ಮತ್ತು.ಸು) ಹಾಗೂ ಅವರ ಅಧೀನ ಅಧಿಕಾರಿಗಳು, ಧಾರವಾಡ ಹೆಚ್ಚುವರಿ ಅಬಕಾರಿ ಅಧೀಕ್ಷಕರು ಮತ್ತು ಹುಬ್ಬಳ್ಳಿ ಅಬಕಾರಿ ಉಪ ಅಧೀಕ್ಷಕರು ಇವರು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X