ಆಂಧ್ರ-ಛತ್ತೀಸ್‌ಗಢ ಗಡಿಯಲ್ಲಿ ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ದುರುಳರ ಬಂಧನ

Date:

Advertisements

ಆದಿವಾಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಆಂಧ್ರ ಪ್ರದೇಶ- ಛತ್ತೀಸ್‌ಗಢ ಗಡಿಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಭದ್ರದ್ರಿ ಕೊಥಗುಡೆಮ್ ಜಿಲ್ಲೆಯ ಪಲ್ವಂಚ ಪೊಲೀಸರು ಇಬ್ಬರು ದುರುಳರನ್ನು ಬಂಧಿಸಿದ್ದಾರೆ.

ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶ ಗಡಿಯಲ್ಲಿರುವ ಕೊಂಟಾ ಬಳಿ ಶುಕ್ರವಾರ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಟೋರಿಕ್ಷಾ ಚಾಲಕ ಮತ್ತು ಅವನ ಸಹಚರ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಲಕ್ಷ್ಮಿದೇವಿಪಲ್ಲಿ ಮಂಡಲದ ಚತ್ತಕೊಂಡ ಗ್ರಾಮದ ನಿವಾಸಿಗಳಾದ ಆರೋಪಿಗಳು ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಿಂದ ಖರೀದಿಸಿದ ತ್ಯಾಜ್ಯ ಎಣ್ಣೆಯ ವ್ಯಾಪಾರದಲ್ಲಿ ತೊಡಗಿರುವ ಸಣ್ಣ ಉದ್ಯಮಿಗಳಾಗಿದ್ದಾರೆ.

ಇದನ್ನು ಓದಿದ್ದೀರಾ? ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಬಿಜೆಪಿ ಶಾಸಕರ ಸೋದರಳಿಯ ಸೇರಿ ಮೂವರ ಬಂಧನ

ಶನಿವಾರ, ಬಾಲಕಿಯನ್ನು ಪಲ್ವಂಚ ಮಂಡಲದ ಜಗನ್ನಾಥಪುರಂನಲ್ಲಿ ಎಸೆದು ಹೋಗಲಾಗಿದೆ. ಸದ್ಯ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಯಿಂದ ಹೆಚ್ಚಿನ ಆರೈಕೆಗಾಗಿ ಕೊಥಗುಡೆಮ್‌ನಲ್ಲಿರುವ ಸರ್ಕಾರಿ ಆಶ್ರಯ ತಾಣಕ್ಕೆ ಸ್ಥಳಾಂತರಿಸಲಾಗಿದೆ. ಸಂತ್ರಸ್ತೆಯ ದೂರಿನ ನಂತರ, ಪಲ್ವಂಚ ಗ್ರಾಮೀಣ ಪೊಲೀಸರು ಎಫ್‌ಐಆರ್ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.

ಇನ್ನು ಕಳೆದ ವಾರ ತೆಲಂಗಾಣ ಪೊಲೀಸರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 10 ಜನರನ್ನು ಬಂಧಿಸಿದ್ದಾರೆ. ಈ ಗುಂಪಲ್ಲಿ ಓರ್ವ ಪ್ರೀತಿ ನೆಪದಲ್ಲಿ ಯುವತಿಯನ್ನು ಆಕರ್ಷಿಸಿ ಗೋವಾ ಕರೆದೊಯ್ದಿದ್ದು, ಬಳಿಕ ತಮ್ಮ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Download Eedina App Android / iOS

X