ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸಹೋದರನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವ ಎಸ್‌ಐಟಿ ತಂಡವು, ಹಲವು ವಸ್ತು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ಎಸ್.ಐ.ಟಿ ಅಧಿಕಾರಿಗಳ ಶೋಧದ ವೇಳೆ ಆ.26 ರಂದು ಮಹೇಶ್ ಶೆಟ್ಟಿ ತಿಮರೋಡಿ ಮನೆಯಿಂದ ಚಿನ್ನಯ್ಯನ ಮೊಬೈಲ್, ದಾಖಲೆ ಪತ್ರ, ಬಟ್ಟೆಗಳ ಬ್ಯಾಗ್ ವಶಕ್ಕೆ ಪಡೆದಿದ್ದು, ಬಳಿಕ ಮಹೇಶ್ ಶೆಟ್ಟಿ ತಿಮರೋಡಿಗೆ ಸಂಬಂಧಿಸಿದ ಕೆಲವು ಮಹತ್ವದ ದಾಖಲೆಗಳು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಧರ್ಮಸ್ಥಳಕ್ಕೆ ಸಂಬಂಧಿಸಿದ ಹಲವು ಪ್ರಮುಖ ದಾಖಲೆ ಪತ್ರಗಳು, ಸಿಸಿಟಿವಿ ಹಾರ್ಡ್ ಡಿಸ್ಕ್ ಜತೆಗೆ ಮಹೇಶ್ ಶೆಟ್ಟಿ ಹೆಂಡತಿ ಮತ್ತು ಮಕ್ಕಳರಿಬ್ಬರ ಮೊಬೈಲ್ ಫೋನ್ ಕೂಡ ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.
ಇದನ್ನು ಓದಿದ್ದೀರಾ? ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ
ತಡರಾತ್ರಿ ಸಹೋದರ ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿ ಮನೆಯಿಂದ ಲ್ಯಾಪ್ ಟಾಪ್ , ಹಾರ್ಡ್ ಡಿಸ್ಕ್, ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.