ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಿರುವುದಾಗಿ ಹೇಳಿರುವ ಸಾಕ್ಷಿ ದೂರುದಾರನಿಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಸಾಕ್ಷಿ ದೂರುದಾರನ ಬಂಧನ ಮಾಡಿದ ಬಳಿಕ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗಿತ್ತು. ಇಂದು(ಬುಧವಾರ) ಮತ್ತೆ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ
ಎಸ್‌ಐಟಿ ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್‌ಇನ್‌ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದ ತಂಡ ಆ.27 ರಂದು ಮಧ್ಯಾಹ್ನ 1:40ಕ್ಕೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಟೆಸ್ಟ್ ಮಾಡಿಸಿದೆ.
ಇನ್ನು ಈಗಾಗಲೇ ತಂಡವು ಸಾಕ್ಷಿ ದೂರುದಾರನಿಗೆ ಕೆಲವು ತಿಂಗಳು ಆಶ್ರಯ ನೀಡಿದ ಹಿನ್ನೆಲೆ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಶೋಧ ನಡೆಸಿದೆ. ದೂರುದಾರನಿಗೆ ಸಂಬಂಧಿಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.
