ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಹಾಗೂ ಅಸ್ಪೃಶ್ಯತೆ ನಿವಾರಣೆಗಾಗಿ ಅರಿವು ಮೂಡಿಸುವುದಕ್ಕಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೀದಿನಾಟಕ, ರೂಪಕ, ಸಾಕ್ಷಚಿತ್ರ, ಪ್ರದರ್ಶನ ಇತ್ಯಾದಿ ಕಾರ್ಯಕ್ರಮಗಳನ್ನು ಇಲಾಖೆಯು ಆಯೋಜಿಸುತ್ತಿದೆ.
ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಇತರೆ ಸ್ವಯಂ ಸೇವಾ ಸಂಘ ಸಂಸ್ಥೆಗಳಿಂದ ಸದರಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೆ.10 ರೊಳಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಜಿಲ್ಲೆ, ಕಾರವಾರ ರವರಿಗೆ ಎಲ್ಲಾ ದಾಖಲಾತಿಯೊಂದಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ತಿಮರೋಡಿ, ಮೋಹನ್ ಶೆಟ್ಟಿ ಮನೆಯಲ್ಲಿ ಶೋಧ: ಹಲವು ವಸ್ತು ವಶಕ್ಕೆ ಪಡೆದ ಎಸ್ಐಟಿ
ಅರ್ಜಿ ನಮೂನೆಗಾಗಿ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
