ಔರಾದ್ (ಬಾ) ತಾಲೂಕಿನಲ್ಲಿ ರಾತ್ರಿಯಿಂದ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು ಗುರುವಾರ (ಆ.28) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ್ ಅವರು ಮೌಖಿಕ ಆದೇಶ ಹೊರಡಿಸಿದ್ದಾರೆ.
ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಔರಾದ್ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸದರಿ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಎಂದು ಗುರುವಾರ ಬೆಳಿಗ್ಗೆ ತಹಸೀಲ್ದಾರ್ ಅವರು ತಿಳಿಸಿದ್ದಾರೆ.
ಕಮಲನಗರ ತಾಲೂಕಿನ ಶಾಲೆಗಳಿಗೆ ರಜೆ :
ʼಕಮಲನಗರ ತಾಲೂಕಿನಲ್ಲಿ ಸತತ ಮಳೆ ಮುಂದುವರೆದ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಇಂದು (ಆ.28) ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಕಮಲನಗರ ತಹಸೀಲ್ದಾರ್ ಅಮಿತ್ ಕುಲಕರ್ಣಿ ‘ಈದಿನ’ಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ : ಔರಾದ್ ಸೀಮೆಯ ಕನ್ನಡ | ದನ ಕಾಯೋರು ತಿಂಗಳಿಗೆ ಪಗಾರ್ ಎಷ್ಟು ತಕೋತಾರ್ ಗೊತ್ತಾ!
ಕಳೆದ ಆ.18 ಹಾಗೂ 19ರಂದು ಕಮಲನಗರ ಹಾಗೂ ಔರಾದ್ ಹಾಗೂ ಕಮಲನಗರ ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದ್ದ ಹಿನ್ನೆಲೆ ಸತತ ಎರಡು ದಿನ ಅಂಗನವಾಡಿ ಸೇರಿದಂತೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.