ಖಾಸಗಿ ಶಾಲೆಗೆ ಸೆಡ್ಡು ಹೊಡೆಯುತ್ತಿರುವ ಹೊಸೂರು ಸರ್ಕಾರಿ ಶಾಲೆ: ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸ್ವಾತಂತ್ರ್ಯ ಪೂರ್ವ 1920ರಲ್ಲಿ ಪ್ರಾರಂಭವಾಗಿದ್ದು, ನಾಡಿನ ಪ್ರಖ್ಯಾತ ಶಿಕ್ಷಣ ತಜ್ಞ ಡಾ. ಎಚ್ ನರಸಿಂಹಯ್ಯ ಅವರೂ ಕೂಡ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. 2020ರಲ್ಲಿ ಶತಮಾನೋತ್ಸವ ಕಂಡ ಈ ಶಾಲೆ ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ಮೂಲಭೂತ ಸೌಕರ್ಯದೊಂದಿಗೆ ಹಾಗೂ ಉತ್ತಮ ಶಿಕ್ಷಕರ ಶಿಕ್ಷಣದಿಂದಾಗಿ ಇಲ್ಲಿನ ಮಕ್ಕಳ ದಾಖಲಾತಿ ಪ್ರಮಾಣ ಪ್ರಸ್ತುತದಲ್ಲಿ ಏರಿಕೆಯಾಗಿದೆ. ಈ ಮೂಲಕ ಮಾದರಿ ಶಾಲೆಯಾಗಿ ರೂಪುಗೊಂಡಿದೆ.

ಶಿಕ್ಷಣ ತಜ್ಞ ಎಚ್. ನರಸಿಂಹಯ್ಯ ಅವರು ಓದಿದ ಶಾಲೆಯು 2025ರ ಪ್ರಾರಂಭದಲ್ಲೇ ಶತಮಾನೋತ್ಸವ ಆಚರಿಸಿದೆ. ಹೊಸೂರು ಸರ್ಕಾರಿ ಪ್ರಾಥಮಿಕ ಶಾಲೆ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದಾಗ ಬಜೆಟ್‌ನಲ್ಲಿ ಮೂರು ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯ ಎಚ್ ವಿ ಮಂಜುನಾಥ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ರಾಜ್ಯದ ಬೇರೆ ಬೇರೆ ಸರ್ಕಾರಿ ಶಾಲೆಗಳ ರೀತಿ ನಮ್ಮ ಹೊಸೂರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತಿತ್ತು. ಸುಮಾರು 10 ಸಾವಿರ ಜನಸಂಖ್ಯೆ ಇರುವ ಈ ಗ್ರಾಮದಲ್ಲಿ ಕೇವಲ 300 ಮಂದಿ ವಿದ್ಯಾರ್ಥಿಗಳು ಮಾತ್ರ ಈ ಶಾಲೆಗೆ ಬರುತ್ತಿದ್ದು, ಬಹಳಷ್ಟು ವಿದ್ಯಾರ್ಥಿಗಳು ಖಾಸಗಿ ವಿದ್ಯಾಸಂಸ್ಥೆಗಳನ್ನೆ ಅವಲಂಬಿಸಿದ್ದರು. ಇದನ್ನೆಲ್ಲ ನೋಡಿದ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುತ್ತಿರುವ ಉತ್ತಮ ಶಿಕ್ಷಣವನ್ನು ನಮ್ಮೂರ ಸರ್ಕಾರಿ ಶಾಲೆಯಲ್ಲಿಯೂ ಕೊಡಬೇಕು ಹಾಗೂ ರಾಜ್ಯದ ಪ್ರತಿಷ್ಠಿತ ಶಾಲೆಯನ್ನಾಗಿ ಮಾರ್ಪಡಿಸಬೇಕೆಂದು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡೆವು, ಕರ್ನಾಟಕ ಮುಖ್ಯಮಂತ್ರಿಗಳು ಶಾಲೆ ಅಭಿವೃದ್ಧಿಗೆ ಮೂರು ಕೋಟಿ ಅನುದಾನ ಕೊಟ್ಟಿದ್ದಾರೆ” ಎಂದು ತಿಳಿಸಿದರು.

ಹೊಸೂರು ಸರ್ಕಾರಿ ಶಾಲೆ 1

ಹೊಸೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ್ ಮಾತನಾಡಿ, “ಹಿರಿಯ ವಿದ್ಯಾರ್ಥಿಗಳ ಸಂಘ ನಮ್ಮ ಶಾಲೆ ಬಗ್ಗೆ ಬಹಳ ಜವಾಬ್ದಾರಿ ತೆಗೆದುಕೊಂಡಿದ್ದು, ನಮ್ಮ ಶಾಲೆ ಉನ್ನತ ಸ್ಥಾನಕ್ಕೆ ಹೋಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ದಾಖಲಾತಿಯೂ ಕೂಡ ಹೆಚ್ಚಾಗಿದೆ. ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ದಾಖಲಾತಿ ಕಡಿಮೆಯಾಗುತ್ತ ಹೋಗುತ್ತಿದೆ. ಆದರೆ ನಮ್ಮ ಶಾಲೆಯಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿದೆ ಎಂಬುದನ್ನು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ” ಎಂದರು.

ಹೊಸೂರು ಸರ್ಕಾರಿ ಶಾಲೆ 2

“ಖಾಸಗಿ ಶಾಲೆಗೂ ಕಡಿಮೆ ಇಲ್ಲದ ರೀತಿ ಅಭಿವೃದ್ಧಿ ಮಾಡಿದ್ದೇವೆ. ಮುಂದೆ ಇನ್ನೂ ಅಭಿವೃದ್ಧಿಯಾಗಲಿದ್ದು, ಹಿರಿಯ ವಿದ್ಯಾರ್ಥಿಗಳ ಸಂಘದಿಂದ ನಮ್ಮ ಶಾಲೆ ಉನ್ನತ ಮಟ್ಟಕ್ಕೆ ತಲುಪುತ್ತಿದೆ” ನಮ್ಮ ಶಾಲೆಯ ಎಲ್ಲ ಶಿಕ್ಷಕರು ಬಹಳ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಇಷ್ಟೆಲ್ಲ ಮಾಡಲು ಕಾರಣವಾಗಿದ್ದು ಹಿರಿಯ ವಿದ್ಯಾರ್ಥಿಗಳ ಸಂಘ. ಹಾಗಾಗಿ ಅವರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ” ಎಂದು ಕೃತಜ್ಞತೆ ಅರ್ಪಿಸಿದರು.

ಹೊಸೂರು ಸರ್ಕಾರಿ ಶಾಲೆ 3

ಹೊಸೂರು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ, “ನಾನು ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಸುಮಾರು ಮೂರ್ನಾಲ್ಕು ವರ್ಷದಿಂದ ಪ್ರಯತ್ನ ಮಾಡಿ 2025ರ ಜನವರಿಯಲ್ಲಿ ಎಚ್ ಎನ್ ಶತಮಾನೋತ್ಸವ ಆಚರಣೆ ಮಾಡಿದೆವು. ಶತಮಾನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯನವರು ಬರಬೇಕಿತ್ತು. ಕಾರಣಾಂತರಗಳಿಂದ ಅವರು ಬರಲು ಸಾಧ್ಯವಾಗಿಲ್ಲ. ಆದರೂ ಕೂಡ ವಿಜೃಂಭಣೆಯಿಂದ ಶತಮಾನೋತ್ಸವ ಆಚರಣೆ ಮಾಡಲಾಯಿತು” ಎಂದು ಸಂತಸ ವ್ಯಕ್ತಪಡಿಸಿದರು.

ಹೊಸೂರು ಸರ್ಕಾರಿ ಶಾಲೆ 4

“ನಾವು ಈ ವರ್ಷ ಏಪ್ರಿಲ್‌ನಲ್ಲಿ ಯಶಸ್ವಿಯಾಗಿ ಬೇಸಿಗೆ ಶಿಬಿರ ಮಾಡಿದ ಕಾರಣದಿಂದ ಹೊಸೂರು ಪ್ರಾಥಮಿಕ ಶಾಲೆಯಲ್ಲಿ 300ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಆದರೆ ಈ ವರ್ಷ ದಾಖಲಾತಿ ಪ್ರಮಾಣ ಹೆಚ್ಚಾಗಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಿವೃತ್ತ ದೈಹಿಕ ಶಿಕ್ಷಕ ಎಚ್ ಕೆ ನರಸಿಂಹಮೂರ್ತಿ ಮಾತನಾಡಿ, “ನಾನು ಸುಮಾರು 16 ವರ್ಷ ಇಲ್ಲಿ ಸೇವ ಸಲ್ಲಿಸಿದ್ದು, ಕ್ರೀಡಾ ಚಟುವಟಿಕೆಗೆ ಹೆಚ್ಚು ಒತ್ತು ನೀಡಿದ್ದೇನೆ. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚು ಒತ್ತು ನೀಡುವುದರ ಜತೆಗೆ ವಿದ್ಯಾಭ್ಯಾಸಕ್ಕೂ ಕೂಡ ಹೆಚ್ಚು ಒತ್ತು ನೀಡುತ್ತಿದ್ದರು” ಎಂದು ಹೇಳಿದರು.

ಹೊಸೂರು ಸರ್ಕಾರಿ ಶಾಲೆ 5

ಗಣಿತ ವಿಷಯ ಶಿಕ್ಷಕ ಪುರುಷೋತ್ತಮ ಮಾತನಾಡಿ, “ಹೊಸೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಾಯದಿಂದ ನಾವೆಲ್ಲರೂ ಕೂಡ ಎಲ್‌ಕೆಜಿಯಿಂದ ಎಂಟನೇ ತರಗತಿವರೆಗೆ ವಿಭಿನ್ನ ಶೈಲಿಯಲ್ಲಿ ಹಲವಾರು ಕ್ರಮಗಳ ಮೂಲಕ ನಾವು ಬೋಧನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯದಲ್ಲೂ ಕಲಿಕೆಯಲ್ಲಿ ಉತ್ತಮವಾಗುವ ನಿಟ್ಟಿನಲ್ಲಿ ನಾವು ಕಾರ್ಯ ಮಾಡುತ್ತಿದ್ದೇವೆ. ಶಾಲೆಯ ಪ್ರತಿ ವಾರದ ಸಭೆಯಲ್ಲಿ ನಾವು ಸುಧಾರಣೆ ಬಗ್ಗೆ ಚರ್ಚೆ ಮಾಡುತ್ತೇವೆ. ರಾಜ್ಯದಲ್ಲೇ ಮಾದರಿ ಶಾಲೆಯಾಗಿ ಪರಿವರ್ತನೆ ಮಾಡಲು ಎಲ್ಲ ಶಿಕ್ಷಕರು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದೇವೆ” ಎಂದು ಈ ದಿನ.ಕಾಮ್‌ಗೆ ತಿಳಿಸಿದರು.

ಹೊಸೂರು ಸರ್ಕಾರಿ ಶಾಲೆ 6

ಹೊಸೂರು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸ್ವಾತಂತ್ರ್ಯ ಪೂರ್ವ 1920ರಲ್ಲಿ ಈ ಶಾಲೆ ಪ್ರಾರಂಭವಾಗಿದ್ದು, ಡಾ. ಎಚ್ ಎನ್‌ರವರೂ ಕೂಡ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ. 2020ರಲ್ಲಿ ಸುಮಾರು 100 ವರ್ಷ ಪೂರೈಸಿದಸಿದ ಹಿನ್ನೆಲೆಯಲ್ಲಿ ನಾವು ಶತಮಾನೋತ್ಸವ ಆಚರಣೆ ಮಾಡಿದ್ದೇವೆ. ನಮ್ಮ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘ ಪ್ರಾರಂಭವಾಗಿದ್ದು, ಸಂಘದ ಮುಖಾಂತರ 2025ರಲ್ಲಿ ಹಬ್ಬದ ರೀತಿ ವೈಭವವಾಗಿ ಶತಮಾನೋತ್ಸವ ಆಚರಣೆ ಮಾಡಿದ್ದೇವೆ” ಎಂದು ಹೇಳಿದರು.

ಹೊಸೂರು ಸರ್ಕಾರಿ ಶಾಲೆ 7

“ಶಾಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ, ಹೊಸೂರು ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎಚ್ ವಿ ವಾಸು ಅವರು ಅಕ್ಷರಧಾಮ ಪೌಂಡೇಶನ್ ವತಿಯಿಂದ ಕರ್ನಾಟಕದಲ್ಲಿರುವ ಮಾದರಿ ಶಾಲೆಗಳನ್ನು ಗುರುತಿಸಿಕೊಂಡು ಆ ಶಾಲೆಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಶಿಕ್ಷಕರ ಕೊರತೆ ಇತ್ತು, ಅತಿಥಿ ಶಿಕ್ಷಕರನ್ನು ನೇಮಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದೇವೆ” ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಖಜಾಂಚಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಧುಗಿರಿ | ರಾಜಣ್ಣಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಯಾದವ ಯುವ ವೇದಿಕೆ ಒತ್ತಾಯ

ಡಾ. ಎಚ್ ಎನ್ ಅವರು ಹುಟ್ಟಿದ ಊರಾಗಿದ್ದು, “ಈ ಶಿಕ್ಷಣ ನೀಡಲು ನನಗೆ ಬಹಳ ಹೆಮ್ಮೆಯಾಗುತ್ತಿದೆ. ಮಕ್ಕಳ ಪ್ರತಿಭೆಯನ್ನು ಹೊರತರಲು ನಾವು ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಶಾಲಾ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಪೋಷಕರು ಸಹಕಾರ ನೀಡ್ತಿದ್ದಾರೆ” ಎಂದು ಬಯಾಲಾಜಿಕಲ್ ಶಿಕ್ಷಕಿ ತಿಳಿಸಿದರು.

ಹೊಸೂರು ಸರ್ಕಾರಿ ಶಾಲೆ 8

“ಈ ಶಾಲೆಯಲ್ಲಿ ವಿದ್ಯಾಭ್ಯಾಸ ಹಾಗೂ ಕ್ರೀಡೆಗಳಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಾರೆ. ನನಗೆ ತರಬೇತಿ ನೀಡಿ ಖೋಖೋ ಆಟದ ವಿಭಾಗ ಮಟ್ಟದವರೆಗೂ ನಾವು ತಲುಪಿದ್ದೇವೆ. ಹೊಸೂರು ಶಾಲೆಯಲ್ಲಿ ಒಳ್ಳೆಯ ವಿದ್ಯಾಭ್ಯಾಸವಿದೆ” ಎಂದು ಶಾಲೆಯ ಹಿರಿಯ ವಿದ್ಯಾರ್ಥಿನಿ ರೇವತಿ ಈ ದಿನ.ಕಾಮ್‌ನೊಂದಿಗೆ ಹೇಳಿಕೊಂಡರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X