ಉಡುಪಿ | ಮದ್ಯ ಮಾರಾಟ ನಿಷೇಧ ಆದೇಶ ಉಲ್ಲಂಘಿಸಿ ಅಕ್ರಮ ಮಾರಾಟ, ಪ್ರಕರಣ ದಾಖಲು

Date:

Advertisements

ಉಡುಪಿ ಜಿಲ್ಲೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಇರುವುದಾಗಿ ಮಾನ್ಯ ಜಿಲ್ಲಾಧಿಕಾರಿಯವರ ಆದೇಶವಿದ್ದೂ ಕೂಡ ಯಾವುದೇ ಪರವಾನಿಗೆ ಇಲ್ಲದೇ ತನ್ನ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಕುಂದಾಪುರದ ಶೇಷಾದ್ರಿ(43) ಎಂಬುವರರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರ ತಾಲೂಕು ಹೆಸ್ಕತ್ತೂರು ಗ್ರಾಮದ ಹೆಸ್ಕತ್ತೂರು ಸಾನ್ವಿ ಕೋಳಿ ಫಾರ್ಮ್ ಹಿಂಬದಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕರು ಭೀಮಾಶಂಕರ ಸಿನ್ನೂರ ಸಂಗಣ್ಣ ಇವರು ಸ್ಥಳಕ್ಕೆ ಹೋಗಿ ನೋಡಲಾಗಿ ಒಬ್ಬ ವ್ಯಕ್ತಿಯು 4 ರಟ್ಟಿನ ಬಾಕ್ಸ್ ಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದು ಕಂಡುಬಂದಿದೆ. 4 ರಟ್ಟಿನ ಬಾಕ್ಸ್‌ಗಳನ್ನು ಪೊಲೀಸರು ಪರಿಶೀಲಿಸಿದಾಗ ತಲಾ ಒಂದೊಂದು ಬಾಕ್ಸ್‌ನಲ್ಲಿ Haywards Cheers Whisky 90 MLನ ಮದ್ಯ ತುಂಬಿದ ಟೆಟ್ರಾ ಪ್ಯಾಕೇಟ್ 72, Original Choice 90 MLನ ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ 96, Original Choice 90 MLನ ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ 21, Mysore Lancer 90 MLನ ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ 84 ಇರುತ್ತದೆ. ಒಟ್ಟು 273 ಮದ್ಯದ ಟೆಟ್ರಾ ಪ್ಯಾಕೆಟ್ ಗಳು ಕಂಡುಬಂದಿದೆ. ಮದ್ಯದ ಪ್ಯಾಕೆಟ್ ನ ತಲಾ ಒಂದರ ಮೌಲ್ಯ 50 ರೂನಂತೆ ಒಟ್ಟು 13,650 ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದ್ಯದ ಪ್ಯಾಕೇಟ್‌ಗಳನ್ನು, ಹಾಗೂ ಮದ್ಯ ಮಾರಾಟ ಮಾಡಿ ಸಂಗ್ರಹಿಸಿದ ಹಣ 280/- ರೂಪಾಯಿಯನ್ನು ಸ್ವಾಧೀನ ಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ:56/ 2025 ಕಲಂ: 32, 34 K E Act ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X