2024ರಲ್ಲಿ ಬಿಜೆಪಿ ಸೋಲುತ್ತದೆ, ಯಾವುದೇ ಉತ್ಪ್ರೇಕ್ಷೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements
  • ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಅಭಿಮತ
  • ‘ಬಿಜೆಪಿಯದು ಅನಾಗರಿಕ, ಅಮಾನವೀಯ ಮನಸ್ಥಿತಿ’

2024ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸೋಲುತ್ತದೆ. ನನ್ನ ಅನುಭವದಿಂದ ಈ ಮಾತು ಹೇಳುತ್ತಿದ್ದೇನೆ, ಯಾವುದೇ ಉತ್ಪ್ರೇಕ್ಷೆ ಇಲ್ಲ. ಈ ಪ್ರಧಾನಿ ಮೋದಿ ಪಾರ್ಲಿಮೆಂಟ್‌ಗೆ ಸರಿಯಾಗಿ ಹೋಗಲ್ಲ, ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲ್ಲ. ಬರೀ ಮನ್ ಕಿ ಬಾತ್. ಆ ಬಾತ್ ನಲ್ಲೂ ದೇಶದ ಜನ ಇರೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದರು.

“ಒಂದು ಕಡೆ ಆರ್‌ಎಸ್‌ಎಸ್‌ ಹಿಡನ್ ಅಜೆಂಡಾ ಜಾರಿಗೊಳಿಸುತ್ತಾ ಮತ್ತೊಂದು ಕಡೆ ಬೆಲೆ ಏರಿಕೆ, ಹಣದುಬ್ಬರ, ಭ್ರಷ್ಟಾಚಾರ, ದುರಾಡಳಿತದಿಂದ ನಾಡಿನ, ದೇಶದ ಜನತೆಯನ್ನು ವಿಪರೀತ ಸಂಕಷ್ಟಕ್ಕೆ ಸಿಲುಕಿಸಿದ್ದರು. ನಾಡಿನ ಜನ ಈ ಎಲ್ಲ ದುಷ್ಟಾಚಾರವನ್ನು ಸಮರ್ಥವಾಗಿ ಧಿಕ್ಕರಿಸಿ ಸೋಲಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡೀ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ” ಎಂದರು.

Advertisements

“ಮನುಸ್ಮೃತಿಯ ಜಾತಿ ಆಧಾರಿತ ಶೋಷಿತ ನ್ಯಾಯಪದ್ಧತಿಯನ್ನು ಜಾರಿಗೆ ತರುವ ಮನಸ್ಥಿತಿಯವರು ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಸೇಡು ತೀರಿಸಿಕೊಳ್ಳುವ ರೀತಿಯಲ್ಲಿ ವರ್ತಿಸುತ್ತಾ ಸಂವಿಧಾನವನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಸಂವಿಧಾನ ಬದಲಾವಣೆ ಆದರೆ ದೇಶದ ಶೇ.90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ” ಎಂದು ಹೇಳಿದರು.

“ಜನರ ಜೇಬಿನಲ್ಲಿರುವ ಹಣವನ್ನು ಕಿತ್ತು ಸಾವಿರಾರು ಕೋಟಿ ಒಡೆಯರಾಗಿರುವ ಶ್ರೀಮಂತರಿಗೆ ನೀಡುವುದು ಅವರ ಆರ್ಥಿಕತೆ. ನಮ್ಮ ರಾಜ್ಯಕ್ಕೆ ಬರಬೇಕಾದ ತೆರಿಗೆ ಮತ್ತು ಆರ್ಥಿಕತೆಯ ನೆರವನ್ನೂ ನೀಡದೆ ಇಡೀ ನಾಡಿನ ಜನತೆಗೆ ಬಿಜೆಪಿ ವಂಚಿಸಿದೆ. ಆದರೆ, ನಾವು ಜನರ ಜೇಬಿನಲ್ಲಿ ಹಣ ಉಳಿಯುವ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ರೂಪಿಸಿದ್ದೇವೆ. ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸುವ ಆಯವ್ಯಯವನ್ನು ನಾವು ಮಂಡಿಸಿದ್ದೇವೆ. ಕರ್ನಾಟಕ ಮಾದರಿಯ ಈ ಅಭಿವೃದ್ಧಿಯನ್ನು ದೇಶದ ಎಲ್ಲಾ ರಾಜ್ಯಗಳೂ ಅಧ್ಯಯನ ನಡೆಸಿ ಅಳವಡಿಸಿಕೊಳ್ಳಲು ಮುಂದಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಹುಸಿ ದೇಶಭಕ್ತರ ಮೋದಿ ಕಾಲ; ಗಾಂಧಿ ಅವಮಾನಿಸುವ ಕಾಲ

ಬಿಜೆಪಿಯದು ಅನಾಗರಿಕ ಮನಸ್ಥಿತಿ

“ರಾಜ್ಯದ ಜನರ ಹಸಿವು ನೀಗಿಸಲು ಅಕ್ಕಿ ಕೊಡಿ ಎಂದರೆ ಕೊಡಲು ಒಪ್ಪದ ಬಿಜೆಪಿಯವರು ಈಗ ಆ ಸಾವಿರಾರು ಟನ್ ಅಕ್ಕಿ ಹಾಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಕೈಯಲ್ಲಿರುವ ಅಕ್ಕಿಗೆ ಹುಳು ಹಿಡಿಯುತ್ತಿದೆ. ಜನರು ಉಪವಾಸ ಇದ್ದರೂ ಪರ್ವಾಗಿಲ್ಲ, ಅಕ್ಕಿ ಹಾಳಾದರೂ ಪರ್ವಾಗಿಲ್ಲ ಆದರೆ ಹಸಿದವರಿಗೆ ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ” ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯ ಬೇಳೆಕಾಳು ಗೊತ್ತಾಗುತ್ತಿದೆ

“ದೇಶದ ಜನ‌ ನೆಮ್ಮದಿಯಾಗಿ, ಸಂತೋಷದಿಂದ ಇದ್ದರೆ ಬಿಜೆಪಿಗೆ ನೆಮ್ಮದಿ ಹಾಳಾಗುತ್ತದೆ. ಹೊಟ್ಟೆಕಿಚ್ಚು ಹೆಚ್ಚಾಗುತ್ತದೆ. ಈಗ ನಾವು ಬಿಜೆಪಿ ಕಾಲದ ಎಲ್ಲ ಹಗರಣಗಳು, ಭ್ರಷ್ಟಾಚಾರದ ತನಿಖೆ ಆರಂಭಿಸಿದ್ದೇವೆ. ಸದ್ಯದಲ್ಲೇ ಬಿಜೆಪಿ ಬೇಳೆಕಾಳು ಹೊರಗೆ ಬರುತ್ತದೆ” ಎಂದರು.

ಕನಿಷ್ಠ 20 ಲೋಕಸಭಾ ಸ್ಥಾನ

ವಿಧಾನಸಭಾ ಚುನಾವಣೆ ಬಳಿಕ ನಮ್ಮ ಕಾರ್ಯಕರ್ತರು ರಿಲಾಕ್ಸ್ ಆಗಬಾರದು. ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ತೀವಿ ಎಂದು ಹೈಕಮಾಂಡ್ ಗೆ ಭರವಸೆ ನೀಡಿದ್ದೀನಿ. ಇದಕ್ಕೂ ಹೆಚ್ಚು ಸೀಟು ಗೆಲ್ಲುತ್ತೀವಿ. ನಮಗೆ 42.8% ಮತ ಬಿದ್ದಿದೆ. ಇದು ಐತಿಹಾಸಿಕ. ಕರ್ನಾಟಕದ ಜನತೆ ದೇಶವನ್ನು ಕಾಪಾಡುವ ನಿಟ್ಟಿನಲ್ಲಿ ಬಹಳ ದೊಡ್ಡ ಹೆಜ್ಜೆ ಇಟ್ಟಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X