ಎಸ್ಐಟಿ ರಚನೆ ಒಳ್ಳೆಯದೆ ಆಗಿದೆ, ರಾಜ್ಯ ಸರಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಎಂ ಬಿ ಪಾಟೀಲ್

Date:

Advertisements

ಧರ್ಮಸ್ಥಳ ಕ್ಷೇತ್ರದ ವಿಚಾರದಲ್ಲಿ ಮಿಥ್ಯಾರೋಪಕ್ಕೆ ಪ್ರಚಾರ ಸಿಗುವ ಬದಲು ಸತ್ಯ ದೃಢವಾಗಲಿ ಎನ್ನುವ ಉದ್ದೇಶದಿಂದ ಸರಕಾರ ಎಸ್ಐಟಿ ರಚಿಸಬೇಕಾಗಿ ಬಂತು. ಇದನ್ನು ಬಿಜೆಪಿಯವರೂ ಸ್ವಾಗತಿಸಿದ್ದರು. ಈಗ ಇದನ್ನೇ ಅವರು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ಅವರು ಗುರುವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ‌, “ಯಾರೋ ಒಬ್ಬ ಅನಾಮಿಕ ತಾನು ಧರ್ಮಸ್ಥಳದಲ್ಲಿ ಹತ್ತಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಲು ಶುರು ಮಾಡಿದ. ಅದೇನೆಂದು ಸರಿಯಾಗಿ ಕಂಡುಕೊಳ್ಳುವುದು ಸರಕಾರದ ಕರ್ತವ್ಯವಾಗಿತ್ತು. ಎಸ್ಐಟಿ ಮಾಡಿದ್ದರಿಂದ ಧರ್ಮಸ್ಥಳದ ಶಕ್ತಿ ಮತ್ತು ಆ ಕ್ಷೇತ್ರದ ಬಗೆಗಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಏಕೆಂದರೆ, ಇದರಿಂದ ವಿನಾ ಕಾರಣ ಕಳಂಕ ಅಂಟಿಕೊಳ್ಳುವ ಅಪಾಯ ತಪ್ಪಿತು” ಎಂದು ತಿಳಿಸಿದ್ದಾರೆ.

“ಧರ್ಮಸ್ಥಳದಲ್ಲಿ ಏನೋ ನಡೆಯಬಾರದ್ದು ನಡೆದಿರಬಹುದು ಎನ್ನುವ ಅನುಮಾನ ಬಿಜೆಪಿಯವರಿಗೂ ಇತ್ತು. ಇಲ್ಲದಿದ್ದರೆ ಎಸ್ಐಟಿ ರಚನೆಯನ್ನೇಕೆ ಅವರು ಸ್ವಾಗತಿಸುತ್ತಿದ್ದರು? ಈಗ ಅಲ್ಲಿ ಅಂಥದ್ದೇನೂ ನಡೆದಿಲ್ಲ ಎಂದಾಗಿದೆ. ಹೀಗಾಗಿ ಬಿಜೆಪಿ ಇದನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹವಣಿಸುತ್ತಿದೆ. ಎಸ್ಐಟಿ ಮಾಡಿದ್ದರಿಂದ ಒಳ್ಳೆಯದೇ ಆಗಿದೆ. ಇದಕ್ಕಾಗಿ ರಾಜ್ಯ ಸರಕಾರ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ” ಎಂದಿದ್ದಾರೆ.

ಬಿಜೆಪಿ ಬಳಿ ವಿಚಾರಗಳೇ ಇಲ್ಲ

“ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಬಾನು ಮುಷ್ತಾಕ್ ಅವರನ್ನು ಕರೆಯಲು ಸರಕಾರ ತೀರ್ಮಾನಿಸಿದೆ. ಬಿಜೆಪಿ ಇದನ್ನೂ ವಿರೋಧಿಸುತ್ತಿದೆ. ಹಿಂದೆ ಕವಿ ಕೆ ಎಸ್ ನಿಸಾರ್ ಅಹಮದ್ ಕೂಡ ದಸರಾ ಉದ್ಘಾಟಿಸಿದ್ದರು. ವಿಜಯಪುರದಲ್ಲಿ ನನ್ನನ್ನು ಕೂಡ ಮುಸ್ಲಿಮರು ತಮ್ಮ ಧಾರ್ಮಿಕ ಕೇಂದ್ರಗಳಿಗೆ ಆಹ್ವಾನಿಸುತ್ತಾರೆ. ಇದರಲ್ಲೆಲ್ಲ ತಪ್ಪೇನಿದೆ?” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಬಿಜೆಪಿಯವರ ಬತ್ತಳಿಕೆಯಲ್ಲಿ ಗಟ್ಟಿ ವಿಚಾರಗಳೇ ಇಲ್ಲ. ಹೀಗಾಗಿಯೇ ಅವರು ಜಾತಿ ಮತ್ತು ಧರ್ಮಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಅಮೆರಿಕದ ತೆರಿಗೆ ಹೇರಿಕೆ, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ಬೆಂಗಳೂರು ನಗರಕ್ಕೆ ಬೇಕಾದ ಎರಡನೆಯ ವಿಮಾನ ನಿಲ್ದಾಣ ಮತ್ತು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡಲಿ” ಎಂದು ಪಾಟೀಲ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

Download Eedina App Android / iOS

X