ಚಾಮರಾಜನಗರ | ಅಭಿವೃದ್ಧಿಕಾಮಗಾರಿ ಸ್ಥಳ ಪರಿಶೀಲಿಸಿದ ಶಾಸಕ, ಜಿಲ್ಲಾಧಿಕಾರಿ

Date:

Advertisements

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಹಾಗೂ ಹನೂರು ಭಾಗಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಿರುವ ವಿವಿಧ ಅಭಿವೃದ್ದಿ ಕಾಮಗಾರಿ ಸಂಬಂಧ ಸ್ಥಳ ಪರಿಶೀಲನೆಯನ್ನು ಶಾಸಕ ಎಂ. ಆರ್. ಮಂಜುನಾಥ್ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ನಡೆಸಿದರು.

ಕೊಳ್ಳೇಗಾಲದ ಮುಡಿಗುಂಡ ನೂತನ ಸೇತುವೆಯನ್ನು ₹15 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಶೀಘ್ರದಲ್ಲೇ ಈ ಸಂಬಂಧ ಸರ್ಕಾರದ ಅಂದಾಜು ಪರಿಶೀಲನಾ ಸಮಿತಿಯ ಮುಂದೆ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ವಿವರವಾಗಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮುಂದಿನ ಪ್ರಕ್ರಿಯೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.

ಹನೂರಿನಲ್ಲಿ ₹8.60 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ದೊರೆತಿರುವ ಹಿನ್ನಲೆಯಲ್ಲಿ ಶಾಸಕ ಎಂ. ಆರ್. ಮಂಜುನಾಥ್ ಅವರೊಂದಿಗೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದರು. ಕಾಮಗಾರಿ ಅನುಷ್ಠಾನ ಸಂಭಂದ ವಹಿಸಬೇಕಿರುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ತಿಳಿಸಿದರು.

ಹನೂರು ತಾಲ್ಲೂಕಿನ ಬೈರನತ್ತ, ಬಿ.ಎಂ. ಹಳ್ಳಿ ಮಾರ್ಗ ಮಧ್ಯದ ಸಂಪರ್ಕವಾದ ತಟ್ಟೆಹಳ್ಳ ಸೇತುವೆಯನ್ನು ₹2.94 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ ಹಿನ್ನಲೆಯಲ್ಲಿ ಸ್ಥಳ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಗೌರಿ ಗಣೇಶ ಹಬ್ಬ; ಸೌಹಾರ್ದತೆ ಸಂದೇಶ ಸಾರಿದ ಹಿಂದೂ, ಮುಸ್ಲಿಂ ಯುವಕರು

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಮೇಶ್‌ಕುಮಾರ್ ಇನ್ನೀತರ ಅಧಿಕಾರಿಗಳು ಭೇಟಿ ಸಂದರ್ಭದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X