ರಾಜ್ಯದ 8.69 ಲಕ್ಷ ರೈತರಿಗೆ ₹8,362 ಕೋಟಿ ಸಾಲ ವಿತರಣೆ: ಸಿಎಂ ಸಿದ್ದರಾಮಯ್ಯ

Date:

Advertisements

ಪ್ರಸ್ತುತ ಸಾಲಿನಲ್ಲಿ ರಾಜ್ಯದ 37 ಲಕ್ಷ ರೈತರಿಗೆ ರೂ. 28 ಸಾವಿರ ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ. 8,362.68 ಕೋಟಿ ಸಾಲ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ರಾಜ್ಯದ ಸಹಕಾರ ವಲಯದ ಪ್ರಗತಿ, ಸವಾಲುಗಳು ಹಾಗೂ ಭವಿಷ್ಯದ ಯೋಜನೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ಸಭೆಯಲ್ಲಿ ರೈತರ ಕಲ್ಯಾಣ, ಸಾಲ ವಿತರಣೆ ಮತ್ತು ಸಹಕಾರ ಸಂಘಗಳ ಆರ್ಥಿಕ ಸ್ಥಿತಿ ಸೇರಿದಂತೆ ಹಲವು ಮುಖ್ಯ ವಿಷಯಗಳು ಪ್ರಸ್ತಾಪವಾದವು.

ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವಂತೆ ಖಾತ್ರಿಪಡಿಸಬೇಕು. ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನ ರೂ. 5,600 ಕೋಟಿಗಳಿಂದ ರೂ. 3,236.11 ಕೋಟಿಗೆ ಕಡಿಮೆ ಮಾಡಿದ್ದರೂ, ಸಾಲ ವಿತರಣೆಯಲ್ಲಿ ಶೇ. 96.07ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ ರೂ. 25,939.09 ಕೋಟಿ ಕೃಷಿ ಸಾಲ ವಿತರಿಸಲಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದರೆ, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟಕ್ಕೆ ತುತ್ತಾಗಿವೆ ಎಂದು ಸಭೆಯಲ್ಲಿ ಗಮನಿಸಲಾಯಿತು. ಅಂತಹ ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿರುವುದು ಕಳವಳಕಾರಿಯಾಗಿದ್ದು, ಅವುಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ ಎಂದು ಒತ್ತು ನೀಡಲಾಯಿತು. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆಯ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ವಿಷಯದಲ್ಲಿ ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ನಿರೀಕ್ಷಕರ 403 ಹುದ್ದೆಗಳು ಖಾಲಿಯಿದ್ದು, ಇವುಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಲಾಯಿತು. ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಆದೇಶಿಸಿದರು.

ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಮತ್ತು ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು. ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

Download Eedina App Android / iOS

X