ಬಿಹಾರದ ಇಡೀ ಗ್ರಾಮ ಒಂದೇ ಮನೆಯಲ್ಲಿದೆ ಎನ್ನುತ್ತೆ ಮತದಾರರ ಪಟ್ಟಿ: ರಾಹುಲ್ ಗಾಂಧಿ ಆರೋಪ

Date:

Advertisements

ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ಗಯಾ ಜಿಲ್ಲೆಯ ಇಡೀ ಹಳ್ಳಿಯೊಂದು ಒಂದೇ ಮನೆಯಲ್ಲಿ ವಾಸಿಸುತ್ತಿರುವಂತೆ ತೋರಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಿಹಾರದಲ್ಲಿ ‘ಮತದಾರ ಅಧಿಕಾರ ಯಾತ್ರೆ’ ನಡೆಸುತ್ತಿರುವ ರಾಹುಲ್ ಗಾಂಧಿ, “ಚುನಾವಣಾ ಆಯೋಗದ ಮ್ಯಾಜಿಕ್ ನೋಡಿ. ಇಡೀ ಹಳ್ಳಿಯು ಒಂದೇ ಮನೆಯಲ್ಲಿ ನೆಲೆಸಿದೆ” ಎಂಬ ಹೇಳಿಕೆಯೊಂದಿಗೆ ತಮ್ಮ ಕಾಂಗ್ರೆಸ್ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರದಲ್ಲಿ ರಾಹುಲ್‌ ಗಾಂಧಿ ‘ಮತದಾರರ ಅಧಿಕಾರ ಯಾತ್ರೆ’

“ಬರಾಚಟ್ಟಿ ವಿಧಾನಸಭಾ ಕ್ಷೇತ್ರದ ಗಯಾ ಜಿಲ್ಲೆಯ ನಿಡಾನಿ ಗ್ರಾಮದಲ್ಲಿ, ಒಂದು ಬೂತ್‌ನ ಎಲ್ಲಾ 947 ಮತದಾರರು ಮನೆ ಸಂಖ್ಯೆ ಆರರ ನಿವಾಸಿಗಳು ಎಂದು ತೋರಿಸಲಾಗಿದೆ” ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಹಾಗೆಯೇ, “ಇದು ಕೇವಲ ಒಂದು ಹಳ್ಳಿಯ ಬಗ್ಗೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅಕ್ರಮಗಳ ಪ್ರಮಾಣವನ್ನು ನಾವು ಊಹಿಸಲೂ ಸಾಧ್ಯವಿಲ್ಲ” ಎಂದು ಹೇಳಿದೆ.

ಆದರೆ ಬಿಹಾರದ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಗಯಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಎಕ್ಸ್‌ ಖಾತೆ ಮೂಲಕ ಈ ಬಗ್ಗೆ ಸ್ಪಷ್ಟೀಕರಣವನ್ನು ನೀಡಿದೆ. “ಮನೆಗಳಿಗೆ ನಿಜವಾದ ಸರಣಿ ಸಂಖ್ಯೆಗಳಿಲ್ಲದ ಹಳ್ಳಿಗಳು ಅಥವಾ ಕೊಳೆಗೇರಿ ಸಮೂಹಗಳಲ್ಲಿ ಒಂದು ಮನೆ ಸಂಖ್ಯೆಯನ್ನು ನೀಡಲಾಗುತ್ತದೆ. ಮತದಾರರನ್ನು ಸೇರಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಲು ಇದನ್ನು ಮಾಡಲಾಗಿದೆ” ಎಂದು ಜಿಲ್ಲಾಧಿಕಾರಿ ಹೇಳಿಕೊಂಡಿದ್ದಾರೆ.

ಗ್ರಾಮದ ನಿವಾಸಿಗಳೆಂದು ಹೇಳಲಾದ ವೀಡಿಯೊ ತುಣುಕುಗಳನ್ನು ಸಹ ಜಿಲ್ಲಾಧಿಕಾರಿಯ X ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

Download Eedina App Android / iOS

X