ಕೆಪಿಟಿಸಿಎಲ್ | ಕಿರಿಯ ಸ್ಟೇಷನ್ ಪರಿಚಾರಕ & ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ

Date:

Advertisements
  • ಮೇ ತಿಂಗಳಲ್ಲಿ ಸಹನ ಶಕ್ತಿ ಪರೀಕ್ಷೆ ನಡೆಸಿದ್ದ ಕವಿಪ್ರನಿನಿ
  • 491 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿದ ಕವಿಪ್ರನಿನಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್‌ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‍ನಲ್ಲಿ ಪ್ರಕಟಿಸಿದ್ದು, htpps://kptcl.karnataka.gov.in/recruitment ಜಾಲತಾಣದಲ್ಲಿ ಆಯ್ಕೆ ಪಟ್ಟಿ ಲಭ್ಯವಿದೆ.

ರಾಜ್ಯದಾದ್ಯಂತ ಕೆಪಿಟಿಸಿಎಲ್ ಉದ್ಯೋಗದ ಭರವಸೆಯಲ್ಲಿದ್ದ 2600 ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇ ತಿಂಗಳಿನಲ್ಲಿ ನಡೆದಿದ್ದ ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದಾದ ಎರಡು ತಿಂಗಳಲ್ಲೇ ನಿಗಮ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಂಧನ ಇಲಾಖೆಯು ಉದ್ಯೋಗದ ಗ್ಯಾರಂಟಿ ನೀಡಿದೆ. ಉಳಿದಂತೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

Download Eedina App Android / iOS

X