ಉತ್ತರ ಕನ್ನಡ | ಅಂತರ ಜಿಲ್ಲಾ ಬೈಕ್‌ ಕಳ್ಳರ ಬಂಧನ; 6 ಬೈಕ್ ವಶ

Date:

Advertisements

ಬೆಂಗಳೂರು, ಬೆಳಗಾವಿ, ಮತ್ತು ಉತ್ತರ ಕನ್ನಡದ ದಾಂಡೇಲಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬೆಲೆಬಾಳುವ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ಅಂತರ-ಜಿಲ್ಲಾ ಬೈಕ್ ಕಳ್ಳರ ತಂಡವನ್ನು ದಾಂಡೇಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 6 ಕಳವು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಅಭಿಷೇಕ ವಿ. ಪವಾರ್, ವಿಲ್ಸನ್ ಜೆ, ಗೌಸ್ ಮೊಹಮ್ಮದ್ ಬೇಪಾರಿ, ದೇವೇಂದ್ರ ಎಲ್. ಲಮಾಣಿ, ಮತ್ತು ಮಹಮ್ಮದ್ ತೌಸಿಫ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿಗೆ ಸೇರಿದವರಾಗಿದ್ದಾರೆ. ಇವರನ್ನು ಆಗಸ್ಟ್ 26 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿಸಲಾಗಿದೆ.

ಅಲೈಡ್ ರಸ್ತೆಯ ನಿವಾಸಿ ಹುಸೇನ್ ಸಾಬ್ ಎಂಬುವವರು ತಮ್ಮ ಬೈಕ್ ಕಳುವಾದ ಬಗ್ಗೆ ದೂರು ನೀಡಿದ ನಂತರ ದಾಂಡೇಲಿ ನಗರ ಠಾಣೆಯ ಪಿಎಸ್ಐ ಅಮೀನ್ ಸಾಬ್ ಅತ್ತರ್ ಅವರು ತನಿಖೆ ಕೈಗೊಂಡರು. ಎಸ್‌ಪಿ ದೀಪನ್ ಅವರ ಮಾರ್ಗದರ್ಶನದಲ್ಲಿ ಈ ಕಳ್ಳರ ತಂಡವನ್ನು ಪತ್ತೆ ಹಚ್ಚಲಾಯಿತು.

ವಶಪಡಿಸಿಕೊಂಡ ಬೈಕ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್, ಎಚ್ಎಫ್ ಡಿಲಕ್ಸ್, ಮತ್ತು ಹೀರೋ ಹೋಂಡಾ ಸೇರಿದಂತೆ ವಿವಿಧ ಕಂಪನಿಗಳ ವಾಹನಗಳಿವೆ. ಈ ಬೈಕ್‌ಗಳು ಬೆಂಗಳೂರು, ಬೆಳಗಾವಿ, ದಾಂಡೇಲಿ ಮತ್ತು ಇತರ ಜಿಲ್ಲೆಗಳಲ್ಲಿ ನೋಂದಣಿಯಾಗಿವೆ.

ಇದನ್ನೂ ಓದಿ: ಉತ್ತರ ಕನ್ನಡ | ಡಾ.ಸರೋಜಿನಿ ಮಹಿಷಿ ವರದಿ: ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಶೇ.97ರಷ್ಟು ಉದ್ಯೋಗಾವಕಾಶ

ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ಜಯಪಾಲ್ ಪಾಟೀಲ್, ಪಿಎಸ್ಐಗಳಾದ ಅಮೀನ್ ಸಾಬ್ ಮತ್ತು ಕಿರಣ್ ಪಾಟೀಲ್, ಹಾಗೂ ಇತರ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಪೊಲೀಸರ ಕಾರ್ಯವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X