ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ವ ಮತ್ತು ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಎಲ್ಲ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಲಿಬ್‌ಐಎಸ್‌ಸಿ, ಬಿಎಸ್‌ಸಿ, ಬಿಎಸ್‌ಡಬ್ಲ್ಯೂ, ಎಂಎ, ಎಂಸಿಜೆ, ಎಂಕಾಂ, ಎಂಎಸ್‌ಸಿ, ಎಂಲಿಬ್‌ಐಎಸ್‌ಸಿ, ಎಂಬಿಎ, ಎಂಸಿಎ, ಎಂಎಸ್‌ಡಬ್ಲ್ಯೂ ಮತ್ತು ಪಿಜಿ ಸರ್ಟಿಫಿಕೇಟ್, ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾಲಯವಾಗಿರುತ್ತದೆ.
ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿಎ ₹9,240, ಬಿಕಾಂ ₹9,790, ಬಿಬಿಎ/ಬಿಎಲ್‌ಐಎಸ್‌ಸಿ ₹13,640, ಬಿಸಿಎ/ಬಿಎಸ್‌ಸಿ ₹26,290, ಬಿಎಸ್‌ಡಬ್ಲ್ಯೂ ₹14,190, ಎಂಎ ₹11,660, ಎಂಸಿಜೆ ₹17,820, ಎಂಕಾಂ ₹13,640, ಎಂಬಿಎ ₹32,890, ಎಂಎಸ್‌ಸಿ/ಎಂಸಿಎ ₹32,670, ಎಂಎಸ್‌ಡಬ್ಲ್ಯೂ ₹23,430, ಎಂಎಲ್‌ಐಎಸ್‌ಸಿ ₹19,965ಗಳಾಗಿರುತ್ತದೆ.
ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಅಕ್ಟೋಬರ್ 15 ಕೊನೆಯ ದಿನಾಂಕವಾಗಿದೆ.
ಬೋಧನಾ ಶುಲ್ಕ ರಿಯಾಯಿತಿ
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್/ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC ನೌಕರರಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ ಶುಲ್ಕದಲ್ಲಿ ಶೇ.10ರಷ್ಟು ರಿಯಾಯಿತಿ ಇರುತ್ತದೆ.
ಉಚಿತ ಪ್ರವೇಶಾತಿ
ಕೋವಿಡ್‌ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ಟ್ರಾನ್ಸ್ ಜೆಂಡರ್/ತೃತೀಯ ಲಿಂಗಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ (ಬಿಎಡ್/ಎಂಬಿಎ ಹೊರತು ಪಡಿಸಿ) ಉಚಿತ ಪ್ರವೇಶಾತಿ ನೀಡಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ
ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339ಕ್ಕೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.