ಕಲಬುರಗಿ | ಯುಜಿಸಿ ರೂಪಿಸಿರುವ ಪಠ್ಯಕ್ರಮ ಒಪ್ಪುವುದಿಲ್ಲ : ಎಸ್‌ಎಫ್‌ಐ ಖಂಡನೆ

Date:

Advertisements

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ರೂಪಿಸಿರುವ ಕಲಿಕಾ ಪಠ್ಯಕ್ರಮ ಆಧಾರಿತ ಕಲಿಕಾ ಚೌಕಟ್ಟು (ಎಲ್‌ಓಸಿಎಫ್) ಕರಡು ವಿರೋಧಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ನೇತ್ರತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಸುಜಾತಾ ವೈ. ಮಾತನಾಡಿ, ‘ಯುಜಿಸಿ ಬಿಡುಗಡೆ ಮಾಡಿದ ಪ್ರಾಚೀನ ಮತ್ತು ಅವೈಜ್ಞಾನಿಕ ಕಲಿಕಾ, ಫಲಿತಾಂಶಗಳ ಆಧಾರಿತ ಪಠ್ಯಕ್ರಮ ಚೌಕಟ್ಟು (ಎಲ್‌ಓಸಿಎಫ್) ಕರಡನ್ನು ತೀವ್ರವಾಗಿ ಖಂಡಿಸುತ್ತದೆ. ಈ ಕರಡು ಸಾರ್ವಜನಿಕ ಪ್ರತಿಕ್ರಿಯೆ ನೀಡಲು ಬಹಳ ಕಡಿಮೆ ಸಮಯವನ್ನು ನಿಗದಿಪಡಿಸಲಾಗಿದೆʼ ಎಂದರು.

ʼಈ ಕರಡು ಪ್ರಕಾರ ರಸಾಯನಶಾಸ್ತ್ರ ಪಠ್ಯದಲ್ಲಿ ಸರಸ್ವತಿಗೆ ನಮಸ್ಕಾರದೊಂದಿಗೆ ಪ್ರಾರಂಭವಾಗುತ್ತದೆ. ವಾಣಿಜ್ಯ ಪಠ್ಯಕ್ರಮವು ಕಾಲೇಜುಗಳಲ್ಲಿ ಕೌಟಿಲ್ಯನ ಅರ್ಥಶಾಸ್ತ್ರವನ್ನು ಕಲಿಸಲು ಸೂಚಿಸುತ್ತದೆ. ವೀರ್ ಸಾವರ್ಕರ್ ಅವರ ʼಭಾರತೀಯ ಸ್ವಾತಂತ್ರ್ಯ ಸಂಗ್ರಾಮʼ ಎಂಬುದನ್ನು ‘ಭಾರತೀಯ ಸ್ವಾತಂತ್ರ್ಯ ಹೋರಾಟ’ದ ಕೋರ್ಸ್‌ನ ಓದುವ ಪಟ್ಟಿಯಲ್ಲಿ ಸೇರಿಸಲಾಗಿದೆ. ಇದು ಶಿಕ್ಷಣದಲ್ಲಿ ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಸೇರಿಸುವ ಪ್ರಯತ್ನವಾಗಿದೆ’ ಎಂದು ಆರೋಪಿಸಿದರು.

‘ಸಂವಿಧಾನದ ಪ್ರಕಾರ ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ವಿಚಾರಣೆ ಮತ್ತು ಸುಧಾರಣೆಯ ಮನೋಭಾವವನ್ನು ಬೆಳೆಸುವುದು ನಾಗರಿಕರ ಮೂಲಭೂತ ಕರ್ತವ್ಯ. ಆದರೆ, ಯುಜಿಸಿಯ ಈ ಪ್ರಯತ್ನ ಕೈಬಿಟ್ಟು ಉನ್ನತ ಶಿಕ್ಷಣದಲ್ಲಿ ಕೇಸರಿಕರಣ ಹಾಗೂ ಅವೈಜ್ಞಾನಿಕ ಮನೋಭಾವವನ್ನು ಪ್ರಚಾರ ಮಾಡುವ ಉದ್ದೇಶದಿಂದ ಮಾಡಲಾಗುತ್ತಿದೆʼ ಎಂದು ದೂರಿದರು.

‘ಸ್ವಾತಂತ್ರ್ಯ ಚಳವಳಿಯ ಕುರಿತಾದ ಕಲಿಕಾ ಪಟ್ಟಿಯಲ್ಲಿ ಸಾವರ್ಕರ್ ಅವರ ಪುಸ್ತಕವನ್ನು ಸೇರಿಸಿರುವುದು ಸ್ವಾತಂತ್ರ್ಯ ಹೋರಾಟದ ನೈಜ ಇತಿಹಾಸದಿಂದ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಉದ್ದೇಶವನ್ನು ಹೊಂದಿದೆ. ಸ್ವಾತಂತ್ರ್ಯ ಹೋರಾಟಕ್ಕೆ ದ್ರೋಹಬಗೆದವರು ರಚಿಸಿದ ಕೃತಿಯಿಂದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುವ ಅಗತ್ಯವಿಲ್ಲ’ ಎಂದರು.

‘ದೇಶದಲ್ಲಿ ಶೈಕ್ಷಣಿಕ ಮನೋಭಾವನೆ ಬದಲಾಯಿಸಲು ಹೊರಟಿರುವವರ ವಿರುದ್ಧ ಎಸ್‌ಎಫ್‌ಐ ಸದಾ ಪ್ರತಿಭಟಿಸುತ್ತದೆ. ಯುಜಿಸಿ ಮಂಡಿಸಿದ ಈ ಅವೈಜ್ಞಾನಿಕ ಮನೋಭಾವದ ಪ್ರಚಾರವನ್ನು ವಿರೋಧಿಸಲು ಎಸ್‌ಎಫ್‌ಐ ವಿದ್ಯಾರ್ಥಿಗಳಿಗೆ ಕರೆ ನೀಡಿದೆ. ಯುವ ಮನಸ್ಸುಗಳನ್ನು ಕೋಮುವಾದಿಗೊಳಿಸುವ ಪ್ರಯತ್ನವನ್ನು ಭಾರತ ವಿದ್ಯಾರ್ಥಿ ಫೆಡರೇಷನ್ ವಿರೋಧಿಸುತ್ತದೆ ಮತ್ತು ತಡೆಯಲು ನಿರಂತರ ಹೋರಾಟ ಮಾಡುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಕಲಬುರಗಿಯಲ್ಲಿ ಮರ್ಯಾದೆಗೇಡು ಹತ್ಯೆ | ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ತಂದೆ

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಪ್ರೇಮ, ಹುಲಗೆಮ್ಮ, ಮಾಲಾಶ್ರೀ, ಕಿರಣ ನಾಟಿಕಾರ್, ಅವಿನಾಶ್, ದೇವಾನಂದ, ರಾಕೇಶ್, ಶರಣು, ಚೇತನ್, ವಿಜಯಕುಮಾರ್, ಸುಧೀರ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X