ಮಂಗಳೂರಿನ ನಂತೂರು ಸಮೀಪ ನಿನ್ನೆ ಸಂಜೆ ನಡೆದ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಕೆಪಿಟಿಯಿಂದ ನಂತೂರು ಕಡೆಗೆ ಸಾಗುತ್ತಿದ್ದ 15 ನಂಬರ್ ರಾಜಲಕ್ಷ್ಮಿ ಬಸ್ಸನ್ನು ಮುಂದೆ ಹೋಗುತ್ತಿದ್ದ ಬೈಕ್ ಸವಾರ ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆಯ ಮೇಲಿನ ಹೊಂಡಕ್ಕೆ ಸಿಕ್ಕಿ ಬಿದ್ದಿದೆ.
ಅಪಘಾತ ಸಂಭವಿಸಬಹುದಾದ ಪರಿಸ್ಥಿತಿಯಲ್ಲಿ ಬಸ್ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಮತ್ತು ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿವೆ.
ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳ ಸ್ಥಿತಿಗೆ ಜನರು ಆಕ್ರೋಶ ಹೊರಹಾಕುತ್ತಿದ್ದು, “ಹೆಚ್ಚುವರಿ ಜೀವಗಳು ಹೋಗಬೇಕೇ ಮತ್ತಷ್ಟು ಎಚ್ಚರಿಕೆಗಾಗಿ?” ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಮುಗಿಲು ಮುಟ್ಟುತ್ತಿದೆ. “ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ನಿಮ್ಮ ಕರ್ತವ್ಯವಲ್ಲವೇ? ಕೇವಲ ಅಧಿಕಾರದ ಆಸೆಗೆ ಹೊಟ್ಟೆ ತುಂಬಿಸಿಕೊಂಡರೆ ಸಾಕಾ? ಜನರ ಜೀವಕ್ಕೆ ಬೆಲೆ ಇಲ್ಲವೇ?” ಎಂಬ ತೀವ್ರವಾಗಿ ಪ್ರಶ್ನಿಸುತ್ತಿದ್ದಾರೆ.