ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ, ಪಿಜಿ ಡಿಪ್ಲೋಮಾ, ವ್ಯಾಲ್ಕು ಆಡೆಡ್ ಡಿಪ್ಲೋಮಾ, ವ್ಯಾಲ್ಯೂ ಆಡೆಡ್ ಅಡ್ವಾನ್ಸ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇದೇ ಸೆಪ್ಟೆಂಬರ್ 2ರಂದು ಬೆಳಗ್ಗೆ 10.30ಕ್ಕೆ ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ತಿಳಿಸಿದ್ದಾರೆ.
ಮಹಿಳಾ ವಿವಿಯ ವಿವಿಧ ಕೋರ್ಸ್‌ಗಳಿಗೆ ಈಗಾಗಲೇ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿನಿಯರು ಸೆಪ್ಟೆಂಬರ್ 2ರಂದು ಅಗತ್ಯ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಿದ್ದು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಸೆಪ್ಟೆಂಬರ್ 3 ರಂದು ಸೂಪರ್ ನ್ಯೂಮರಿ ಕೋಟಾದ ಅಡಿಯಲ್ಲಿ ಪ್ರವೇಶ ಪಡೆದುಕೊಳ್ಳಬಹುದಾಗಿದ್ದು ಸೆಪ್ಟೆಂಬರ್ 4 ರಂದು ಸೆಲ್ಸ್ ಸಪೋರ್ಟಿಂಗ್ ಯೋಜನೆ ಅನ್ವಯ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ಮುಖ್ಯ ಆವರಣ, ಬೀದರ್, ಮಂಡ್ಯ, ಸಿಂಧನೂರು ಮತ್ತು ಉಡತಡಿಗಳಲ್ಲಿ ಪ್ರವೇಶ ಕೌನ್ಸೆಲಿಂಗ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ವಿವಿಯ ವೆಬ್ ಸೈಟ್ website: www.kawu.ac.in ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ:ವಿಜಯಪುರ | ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ