ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್: ಇತಿಹಾಸ ನಿರ್ಮಿಸಿ ಪದಕ ಗೆದ್ದ ಸಾತ್ವಿಕ್‌–ಚಿರಾಗ್

Date:

Advertisements

ಪ್ಯಾರಿಸ್‌ನಲ್ಲಿ ನಡೆದ 2025ರ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಈ ಪದಕದೊಂದಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್​ಶಿಪ್​ ಡಬಲ್ಸ್​ನಲ್ಲಿ ಭಾರತದ ಪರ ಎರಡು ಪದಕಗಳನ್ನು ಗೆದ್ದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಸಾತ್ವಿಕ್-ಚಿರಾಗ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಸಾತ್ವಿಕ್ ‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕಂಚಿನ ಪದಕ ಗೆದ್ದಿದ್ದರು.

ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಅಗ್ರ ಡಬಲ್ಸ್‌ ಆಟಗಾರರಾದ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕಂಚಿನ ಪದಕ ಗೆದ್ದಿದ್ದಾರೆ.

ಪುರುಷರ ಡಬಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ ಜೋಡಿಯು 11ನೇ ಶ್ರೇಯಾಂಕದ ಚೀನಾದ ಚೆನ್ ಬೊ ಯಂಗ್ ಮತ್ತು ಲಿಯು ಯಿ ವಿರುದ್ಧ 19-21, 21-18, 12-21ರ ಅಂತರದಲ್ಲಿ ಮುಗ್ಗರಿಸಿತು.

ಈ ಮೊದಲು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಸೆಮಿಫೈನಲ್‌ಗೆ ದಾಪುಗಾಲಿಡುವ ಮೂಲಕ ಪದಕ ಖಚಿತಪಡಿಸಿಕೊಂಡಿದ್ದರು.

ಆ ಮೂಲಕ ಪ್ರತಿಷ್ಠಿತ ಟೂರ್ನಿಯಲ್ಲಿ ಸಾತ್ವಿಕ್‌–ಚಿರಾಗ್ ಜೋಡಿ ಎರಡನೇ ಸಲ ಕಂಚಿನ ಪದಕ ಗೆದ್ದ ಸಾಧನೆ ಮಾಡಿದೆ. ಈ ಹಿಂದೆ 2022ರಲ್ಲೂ ಕಂಚಿನ ಪದಕ ಗೆದ್ದಿದ್ದರು.

ಇದನ್ನು ಓದಿದ್ದೀರಾ? ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

67 ನಿಮಿಷಗಳ ಹೋರಾಟದ ಅಂತಿಮದಲ್ಲಿ ಮುಗ್ಗರಿಸಿದ ಸಾತ್ವಿಕ್‌–ಚಿರಾಗ್, ಬಿಡಬ್ಲ್ಯುಎಫ್‌ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ತಲುಪಿದ ಭಾರತದ ಮೊದಲ ಪುರುಷರ ಜೋಡಿ ಎಂದೆನಿಸಿಕೊಳ್ಳುವ ಅವಕಾಶದಿಂದ ಸ್ವಲ್ಪದರಲ್ಲೇ ವಂಚಿತವಾಯಿತು.

ಇದಕ್ಕೂ ಮುನ್ನ 2023 ರಲ್ಲಿ ದುಬೈನಲ್ಲಿ ನಡೆದ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಜೋಡಿ ಇತಿಹಾಸ ಸೃಷ್ಟಿಸಿದ್ದರು. ಫೈನಲ್ ಪಂದ್ಯದಲ್ಲಿ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಇಯೊ ಯೀ ಜೋಡಿಯನ್ನು ಸೋಲಿಸಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಐತಿಹಾಸಿಕ ಸಾಧನೆ ಮಾಡಿದ್ದರು.

ಅಲ್ಲದೆ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಡಬಲ್ಸ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಜೋಡಿ ಎನಿಸಿಕೊಂಡಿದ್ದರು. ಇದಕ್ಕೂ ಮುನ್ನ ದೀಪ್ ಘೋಸ್ ಮತ್ತು ರಾಮನ್ ಘೋಸ್ ಜೋಡಿ 1971ರಲ್ಲಿ ನಡೆದ ಈ ಟೂರ್ನಿಯಲ್ಲಿ ಸೆಮಿಫೈನಲ್‌ವರೆಗೆ ತಲುಪಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು.

ಆದರೆ 52 ವರ್ಷಗಳ ಏಷ್ಯಾದ ಅಂಗಳದಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಯಶಸ್ವಿಯಾಗಿದ್ದರು. ಇದೀಗ ವಿಶ್ವ ಬ್ಯಾಡ್ಮಿಂಟನ್​ನಲ್ಲೂ 2ನೇ ಬಾರಿ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪಾತಾಕೆಯನ್ನು ಮುಗಿಲೆತ್ತರಕ್ಕೇರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌...

Download Eedina App Android / iOS

X