ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಯೆಮನ್ ಹೌತಿ ಸರ್ಕಾರದ ಪ್ರಧಾನಿ ಹತ್ಯೆ: ಪ್ರತಿಕಾರದ ಎಚ್ಚರಿಕೆ

Date:

Advertisements

ಯೆಮನ್‌ನ ಹೌತಿ ಸಂಘಟನೆ ನಿಯಂತ್ರಣದಲ್ಲಿರುವ ರಾಜಧಾನಿ ಸನಾ ನಗರದ ಮೇಲೆ ಇಸ್ರೇಲ್ ನಡೆಸಿದ ಭಾರೀ ವೈಮಾನಿಕ ದಾಳಿಯಲ್ಲಿ ಹೌತಿ ಸರ್ಕಾರದ ಪ್ರಧಾನಿ ಅಹ್ಮದ್ ಘಲೆಬ್ ಅಲ್-ರಾಹ್ವಿ ಸೇರಿದಂತೆ ಹಲವು ಹಿರಿಯ ಸಚಿವರು ಮತ್ತು ಅಧಿಕಾರಿಗಳು ಹತರಾಗಿದ್ದಾರೆ ಎಂದು ಹೌತಿ ಸುಪ್ರೀಂ ಪೊಲಿಟಿಕಲ್ ಕೌನ್ಸಿಲ್ ಮುಖ್ಯಸ್ಥ ಮಹ್ದಿ ಅಲ್-ಮಷತ್ ಶನಿವಾರ ದೃಢಪಡಿಸಿದ್ದಾರೆ.

ಈ ದಾಳಿ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಹೌತಿಗಳು ತೀವ್ರ ಪ್ರತೀಕಾರದ ಎಚ್ಚರಿಕೆ ನೀಡಿದ್ದಾರೆ.

ಗುರುವಾರ (ಆಗಸ್ಟ್ 28) ನಡೆದ ಈ ದಾಳಿಯಲ್ಲಿ ಪ್ರಧಾನಿ ಅಲ್-ರಾಹ್ವಿ ಅವರ ಜೊತೆಗೆ ರಕ್ಷಣಾ ಸಚಿವ ಮೊಹಮದ್ ನಾಸರ್ ಅಲ್-ಅತಿಫಿ ಸೇರಿದಂತೆ ಇತರ ಹಲವು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಕೊಲ್ಲಲ್ಪಟ್ಟಿದ್ದಾರೆ ಎಂದು ಹೌತಿ ಮೂಲಗಳು ತಿಳಿಸಿವೆ. ದಾಳಿಯ ಸಂದರ್ಭದಲ್ಲಿ ಸರ್ಕಾರಿ ಕಟ್ಟಡದಲ್ಲಿ ನಡೆಯುತ್ತಿದ್ದ ಒಂದು ಸಾಮಾನ್ಯ ಸಭೆಯನ್ನು ಗುರಿಯಾಗಿಸಲಾಗಿತ್ತು ಎಂದು ಮಷತ್ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ. ಆದರೆ, ರಕ್ಷಣಾ ಸಚಿವರ ಸಾವು ಖಚಿತವಾಗಿಲ್ಲ ಎಂದು ಕೆಲವು ವರದಿಗಳು ಸೂಚಿಸಿವೆ.

ಇಸ್ರೇಲ್ ಸೇನೆಯು ಶುಕ್ರವಾರ ಹೇಳಿಕೆ ನೀಡಿ, ಹೌತಿ ಸಂಘಟನೆಯ ಹಿರಿಯ ನಾಯಕರು ಮತ್ತು ರಕ್ಷಣಾ ಸಚಿವರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ತಿಳಿಸಿತ್ತು. “ದಾಳಿಯ ಫಲಿತಾಂಶಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಇಸ್ರೇಲ್ ಹೇಳಿದ್ದು, ಇದು ಹೌತಿಗಳ ಮೇಲಿನ ಅತ್ಯಂತ ಭಾರೀ ಹೊಡೆತ ಎಂದಿದೆ. ಅಲ್-ರಾಹ್ವಿ ಅವರು ಕಳೆದ ಒಂದು ವರ್ಷದ ಹಿಂದೆ (ಆಗಸ್ಟ್ 2024) ಪ್ರಧಾನಿಯಾಗಿ ನೇಮಕಗೊಂಡಿದ್ದರು. ಆದರೆ, ಉಪ ಪ್ರಧಾನಿ ಮೊಹಮದ್ ಮೊಫ್ತಾ ಅವರು ಸರ್ಕಾರದ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಅಲ್-ರಾಹ್ವಿ ಅವರ ಸಾವಿನ ನಂತರ, ಪ್ರಧಾನ ಮಂತ್ರಿಗಳ ಕರ್ತವ್ಯಗಳನ್ನು ಮೊಫ್ತಾ ಅವರಿಗೆ ನಿಯೋಜಿಸಲಾಗಿದೆ ಎಂದು ಹೌತಿ ಮೂಲಗಳು ತಿಳಿಸಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ

2023ರ ಅಕ್ಟೋಬರ್‌ನಲ್ಲಿ ಇಸ್ರೇಲ್ ಗಾಜಾ ಮೇಲೆ ದಾಳಿ ಆರಂಭಿಸಿದ ನಂತರ, ಹೌತಿಗಳು ಇಸ್ರೇಲ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕಾ ಹೌತಿ ಗುರಿಗಳ ಮೇಲೆ ದಾಳಿಗಳನ್ನು ತೀವ್ರಗೊಳಿಸಿವೆ. ಈ ಇತ್ತೀಚಿನ ದಾಳಿ ಹೌತಿಗಳ ನಾಯಕತ್ವಕ್ಕೆ ದೊಡ್ಡ ಹೊಡೆತವಾಗಿದ್ದು, ಅಮೆರಿಕಾ ಮತ್ತು ಇಸ್ರೇಲ್ ದಾಳಿಗಳು ಆರಂಭಗೊಂಡ ನಂತರ ಕೊಲ್ಲಲ್ಪಟ್ಟ ಅತ್ಯಂತ ಹಿರಿಯ ಹೌತಿ ಆಡಳಿತಾಧಿಕಾರಿ ಇವರು ಎಂದು ವರದಿಗಳು ಹೇಳಿವೆ.

ಮಹ್ದಿ ಅಲ್-ಮಷತ್ ಅವರು ತಮ್ಮ ಹೇಳಿಕೆಯಲ್ಲಿ, “ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ. ಗಾಯಗಳಿಂದಲೇ ನಾವು ವಿಜಯವನ್ನು ದಾಖಲಿಸುತ್ತೇವೆ” ಎಂದು ಹೇಳಿದ್ದಾರೆ. ಅಲ್ಲದೆ, ವಿದೇಶಿ ಕಂಪನಿಗಳು ಇಸ್ರೇಲ್ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ. ಗಾಜಾ ಮೇಲಿನ ದಾಳಿ ನಿಲ್ಲುವವರೆಗೆ ತಮ್ಮ ನಿಲುವನ್ನು ಬದಲಿಸುವುದಿಲ್ಲ ಎಂದು ಹೌತಿಗಳು ಸ್ಪಷ್ಟಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೋಹಾ | ಕರ್ನಾಟಕ ಸಂಘ ಕತಾರ್, ಐಸಿಸಿ ಸಹಯೋಗದೊಂದಿಗೆ ‘ಎಂಜಿನಿಯರ್ಸ್‌ ಡೇ’ ಆಚರಣೆ

ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ, ಕರ್ನಾಟಕ...

ಭಾರತ-ಭೂತಾನ್ ನಡುವೆ 2 ಗಡಿಯಾಚೆಗಿನ ರೈಲು ಯೋಜನೆ ಘೋಷಣೆ

ಭೂತಾನ್ ಮತ್ತು ಭಾರತದ ನಡುವೆ ಎರಡು ಗಡಿಯಾಚೆಗಿನ ರೈಲು ಸಂಪರ್ಕ ನಿರ್ಮಿಸುವ...

ಭಯೋತ್ಪಾದಕ ಸಂಘಟನೆ ಸಾಲಿಗೆ ಬಿಷ್ಣೋಯ್ ಗ್ಯಾಂಗ್: ಕೆನಡಾ ಸರ್ಕಾರ ಘೋಷಣೆ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಕೆನಡಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು,...

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು...

Download Eedina App Android / iOS

X