ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್ ಐ.ಟಿ ರಚನೆಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೇ ಸ್ವಾಗತಿಸಿದ್ದಾರೆ. ಸತ್ಯ ಹೊರ ಬರಬೇಕೆಂಬ ಕಾರಣದಿಂದ ಎಸ್ಐಟಿ ರಚನೆ ಮಾಡಲಾಗಿದೆ. ಇಲ್ಲದಿದ್ದರೆ ಧರ್ಮಸ್ಥಳದ ಬಗ್ಗೆ ಯಾವಾಗಲೂ ತೂಗುಗತ್ತಿ ಇರುತಿತ್ತು. ಈ ಸಂದೇಹವನ್ನು ಹೋಗಲಾಡಿಸಲು ಎಸ್.ಐ.ಟಿ ರಚನೆ ಮಾಡಲಾಗಿದೆ. ಫೀರ್ಯಾದುದಾರ ನ್ಯಾಯಾಲಯದ ಮುಂದೆ ಹೋಗಿ 164 ಹೇಳಿಕೆಯನ್ನು ನೀಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಎಸ್‌ಐಟಿ ರಚಿಸಬೇಕೆಂದು ಒತ್ತಾಯವನ್ನು ಮಾಡಿದ್ದರು. ವಿಪಕ್ಷಗಳು ಕೂಡ ಇದನ್ನು ಸ್ವಾಗತಿಸಿದ್ದರು ಎಂದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಗೆದಷ್ಟೂ ಆಳವಾಗುತ್ತಿದೆ ಧರ್ಮಸ್ಥಳ ಪ್ರಕರಣ; ಸೌಜನ್ಯಳಿಗೆ ಸಿಗಲಿ ನ್ಯಾಯ
ಕೇಂದ್ರ ಸರ್ಕಾರ ಜಿ.ಎಸ್.ಟಿ ಎರಡು ಸ್ಲ್ಯಾಬ್ ಮಾಡುವುದರಿಂದ ಪ್ರತಿ ವರ್ಷ 15 ಸಾವಿರ ಕೋಟಿ ನಷ್ಟವಾಗಬಹುದೆಂದು ಅಂದಾಜಿಸಲಾಗಿದೆ. ತರ್ಕಬದ್ಧಗೊಳಿಸುವುದನ್ನು ಸ್ವಾಗತಿಸುತ್ತೇವೆ ಆದರೆ ಹಣಕಾಸಿನ ರಕ್ಷಣೆಯಾಗಬೇಕೆನ್ನುವುದು ನಮ್ಮ ಉದ್ದೇಶ. ಅದಕ್ಕಾಗಿ ಎಂಟು ರಾಜ್ಯಗಳು ದೆಹಲಿಯಲ್ಲಿ ಚರ್ಚೆ ಮಾಡಿದ್ದು, 2.50 ಲಕ್ಷ ಕೋಟಿ ರೂ. ಇಡೀ ರಾಜ್ಯದಲ್ಲಿ ಸಂಗ್ರಹವಾಗುತ್ತದೆ. 15 ಸಾವಿರ ಕೋಟಿ ನಷ್ಟವಾಗುವುದು ದೊಡ್ಡ ಮೊತ್ತ ಎಂದರು.
2017 ರಲ್ಲಿ ಜಿಎಸ್ ಟಿ ಜಾರಿಯಾದಾಗ 5 ವರ್ಷ ಮಾತ್ರ ಪರಿಹಾರ ನೀಡುವುದಾಗಿ ಹೇಳಿದ್ದರು. ಈಗ ಸುಮಾರು ಶೇ. 12 ತೆರಿಗೆ ಬೆಳವಣಿಗೆಯಾಗಿದೆ. ಲಕ್ಷುರಿ(ಸಿನ್ ಗೂಡ್ಸ್ ) ವಸ್ತುಗಳಾದ ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಬೆಂಜ್ ಕಾರುಗಳಲ್ಲಿ ಓಡಾಡುವವ ಮೇಲೆ ಸೆಸ್ ಹಾಕಿ ನಮಗೆ ಪರಿಹಾರ ಕೊಡಿ ಎಂದು ಸಲಹೆ ನೀಡಿದ್ದೇವೆ. ಸಚಿವ ಕೃಷ್ಣಭೈರೇಗೌಡ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೇ ಈಗ ಎಂಟು ರಾಜ್ಯಗಳ ಆರ್ಥಿಕ ಸಚಿವರೊಂದಿಗೆ ಸಭೆ ನಡೆಸಿದ್ದಾರೆ.
ಸೆಪ್ಟೆಂಬರ್ 3 ಮತ್ತು 4 ರಂದು ನಡೆಯಲಿರುವ ಸಭೆಯಲ್ಲಿ ಇದನ್ನು ಪ್ರಸ್ತಾಪ ಮಾಡಲಿದ್ದಾರೆ ಎಂದರು.
