ವೈಜ್ಞಾನಿಕತೆ ಮತ್ತ ವೈಚಾರಿಕತೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

Date:

Advertisements
  • ಕನಕ ಗುರುಪೀಠದ ಶಾಖಾ ಮಠದಲ್ಲಿ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
  • ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು : ಸಿಎಂ

ಮಕ್ಕಳು ವೈಜ್ಞಾನಿಕತೆ, ವೈಚಾರಿಕತೆ ಬೆಳೆಸಿಕೊಳ್ಳಬೇಕು. ಆಗ ಮಾತ್ರ ನಾವು ನಾಗರಿಕರಾಗಲು, ಮಾನವೀಯರಾಗಲು ಸಾಧ್ಯ. ಸಮಾಜದ ಹಲವು ಸಮಸ್ಯೆಗಳಿಗೆ ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವದಲ್ಲಿ ಪರಿಹಾರ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.‌

ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಮತ್ತು ನಾನಾ ಕ್ಷೇತ್ರಗಳ ಸಾಧಕರನ್ನು ಪುರಸ್ಕರಿಸಿ ಮಾತನಾಡಿದರು.

ಅಧಿಕಾರಕ್ಕಾಗಿ ರಾಜಕೀಯ ಅಲ್ಲ. ಸೇವಾ ಮನೋಭಾವ ಇದ್ದವರು ಮಾತ್ರ ರಾಜಕಾರಣಕ್ಕೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisements

ಸಮಾಜದ ಪ್ರಗತಿ ಮತ್ತು ಬೆಳವಣಿಗೆಗೆ ಸೇವಾ ಮನೋಭಾವದ ರಾಜಕಾರಣಿಗಳ ಅಗತ್ಯವಿದೆ. ಇತ್ತೀಚಿನ ದಿನಗಳಲ್ಲಿ ಸೇವಾ ಮನೋಭಾವ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರತಿಭೆ-ಅವಕಾಶ-ಶೈಕ್ಷಣಿಕ ವಾತಾವರಣ ಹಾಗೂ ಪೋಷಕರ ಸಹಕಾರ ಇದ್ದಾಗ ಮಾತ್ರ ಪ್ರತಿಭಾವಂತರು ಸಾಧನೆ ಮಾಡಲು ಸಾಧ್ಯ. ನಾವು ಪಡೆದ ಅಂಕಗಳು, ಹುದ್ದೆ ಮತ್ತು ಆಸ್ತಿ ಎಲ್ಲಕ್ಕಿಂತ ಮುಖ್ಯವಾದುದು ಮಾನವೀಯತೆ ಮತ್ತು ವೈಚಾರಿಕತೆ ದೊಡ್ಡದು. ಮಾನವೀಯತೆ ಇಲ್ಲದಿದ್ದರೆ ಪಡೆದ ಅಂಕಗಳು, ಹುದ್ದೆಗಳೆಲ್ಲಾ ನಿಷ್ಪ್ರಯೋಜಕ ಎಂದರು.

ಶ್ರೀನಿರಂಜನಾನಂದಪುರಿ ಮಹಾಸ್ವಾಮಿಗಳು ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದಪುರಿ ಮಹಾ ಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು, ಈಶ್ವರಾನಂದಪುರಿ ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಶಾಸಕರಾದ ಪ್ರಿಯಕೃಷ್ಣ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಕೊಪ್ಪಳ ವಿವಿ ಕುಲಸಚಿವರಾದ ಡಾ.ಬಿ.ಕೆ.ರವಿ, ರಾಜ್ಯ ಕುರುಬರ ಸಂಘದ ಅಧ್ಯಕ್ಷರಾದ ಸುಬ್ರಮಣಿಯವರು ಸೇರಿ ಹಲವು ಗಣ್ಯರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X