ರಾಯಚೂರು | ಟಿಪ್ಪರ್ ಡಿಕ್ಕಿ : ಬೈಕ್ ಸವಾರ ಸಾವು

Date:

Advertisements

ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.

ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ ವೇಳೆಗೆ ಸುರೇಶ್ ತಮ್ಮ ಬೈಕ್‌ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಶಕ್ತಿನಗರ ಪ್ರದೇಶದಲ್ಲಿ ನೂರಾರು ಫ್ಯಾಕ್ಟರಿಗಳು ಇರುವುದರಿಂದ ವಾಹನ ಸಂಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಸ್ತೆ ಬದಿಯಲ್ಲಿ ನೂರಾರು ವಾಹನಗಳನ್ನು ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಹಾಗೂ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶ – ಯುವಕ ಸಾವು

ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಗಾಗಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕಾರ್ಮಿಕರು ಒತ್ತಾಯ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಉದಯೋನ್ಮುಖ ಕವಿಗಳು ಕವಿತೆ ರಚಿಸಲು ಆದ್ಯತೆ ನೀಡಬೇಕು: ವಿ. ಕುಲಪತಿ ಮಲ್ಲಿಕಾ ಘಂಟಿ

'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ...

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

Download Eedina App Android / iOS

X