ಧಾರವಾಡ | ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲದೆ ಪರದಾಟ; ದಾರಿ ಮಧ್ಯೆ ಶವವಿಟ್ಟು ಪ್ರತಿಭಟನೆ

Date:

Advertisements

ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲ ಎಂದು ಆರೋಪಿಸಿ ರಸ್ತೆಯ ಮಧ್ಯೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದ ಘಟನೆ ಧಾರವಾಡದ ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಸೊಟಕನಾಳ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಅಗತ್ಯ ರಸ್ತೆ ಇಲ್ಲದಿರುವುದರಿಂದ ರಸ್ತೆ ನಿರ್ಮಿಸುವಂತೆ ಒತ್ತಾಯಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಬೇಸರಗೊಂಡಿದ್ದ ಗ್ರಾಮಸ್ಥರು ಶನಿವಾರ ನಿಧನವಾಗಿದ್ದ ಮಲ್ಲವ್ವ ಹನಮಂತಪ್ಪ ಆನಂದಿ ಅವರ ಶವವನ್ನು ಗ್ರಾಮದ ಬಸ್ ನಿಲ್ದಾಣದ ಹತ್ತಿರ ಇಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನವಲಗುಂದ ತಹಶೀಲ್ದಾರ್‌ ಕಾರ್ಯಾಲಯದ ಎದುರಿಗೂ ಶವವಿಟ್ಟು ಪ್ರತಿಭಟನೆ ನಡೆಸುವ ತಯಾರಿಯಲ್ಲಿದ್ದರು. ಸುದ್ದಿ ತಿಳಿದ ನವಲಗುಂದ ಪೊಲೀಸ್ ಠಾಣಿಯ ಎಸ್‍ಐ ಜನಾರ್ಧನ ಭಟ್ರಹಳ್ಳಿ, ಸೊಟಕನಾಳ ಗ್ರಾಮಕ್ಕೆ ತೆರಳಿ ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ನಡೆಸಿದ್ದರು. ಆಗ ನವಲಗುಂದ ತಹಶೀಲ್ದಾರ್‌ ಕಾರ್ಯಾಲಯದ ಬದಲಿಗೆ ಗ್ರಾಮದ ಬಸ್ ನಿಲ್ದಾಣದಲ್ಲಿಯೇ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು. ಅಲ್ಲದೆ, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಬಂದು ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆ ನಿರ್ಮಿಸುವವರೆಗೂ ಪ್ರತಿಭಟಿಸುವುದಾಗಿ ಪಟ್ಟು ಹಿಡಿದಿದ್ದರು.

ಹಲವಾರು ವರ್ಷಗಳಿಂದ ಗ್ರಾಮದಲ್ಲಿ ಸ್ಮಶಾನವೇ ಇರಲಿಲ್ಲ. ಇತ್ತೀಚೆಗೆ ಸರ್ಕಾರ 10 ಗುಂಟೆ ಜಾಗ ನೀಡಿದೆ. ಆದರೆ, ಅಲ್ಲಿಗೆ ಹೋಗಲು ರಸ್ತೆಯಿಲ್ಲದ ಕಾರಣ ಖಾಸಗಿ ಜಮೀನಿನ ಮಾಲೀಕರು ಬೆಳೆ ಇದ್ದ ಸಂದರ್ಭದಲ್ಲಿ ತಮ್ಮ ಹೊಲಗಳಲ್ಲಿ ಹೋಗಲು ಆಕ್ಷೇಪಿಸುತ್ತಾರೆ. ರಸ್ತೆ ನಿರ್ಮಿಸುವಂತೆ ಹಲವಾರು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಇದನ್ನೂ ಓದಿ: ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

ಎಸ್‍ಐ ಜನಾರ್ಧನ ಅವರು ವಿಷಯ ತಿಳಿಸಿದ ನಂತರ ಗ್ರಾಮಕ್ಕೆ ಆಗಮಿಸಿದ ತಹಶೀಲ್ದಾರ್‌ ಸುಧೀರ ಸಾಹುಕಾರ ಗ್ರಾಮಸ್ಥರೊಂದಿಗೆ ಚರ್ಚಿಸಿ ಗ್ರಾಮದಲ್ಲಿನ ಸ್ಮಶಾನ ರಸ್ತೆ ಕುರಿತಾದ ವಿಷಯ ಗಮನದಲ್ಲಿದೆ. ಸ್ಮಶಾನ ಮಾರ್ಗದಲ್ಲಿ ಖಾಸಗಿ ಜಮೀನುಗಳಿದ್ದು, ಆ ಜಮೀನು ಮಾಲೀಕರೊಂದಿಗೆ ಮಾತನಾಡಿ ಶೀಘ್ರದಲ್ಲಿಯೇ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದರು. ನಂತರ ಗ್ರಾಮಸ್ಥರು ಮಲ್ಲವ್ವ ಆನಂದಿ ಅವರ ಅಂತ್ಯಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಮಹಾಂತೇಶ ಕಟಗಿ, ಮುಕ್ತೇದಾರ, ಸಿಪಿಐ ರವಿ ಕಪ್ಪತ್ತನವ ಹಾಗೂ ಗ್ರಾಪಂ ಅಧ್ಯಕ್ಷ, ಸದಸ್ಯರು ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X