ಉತ್ತರ ಪ್ರದೇಶದ ಶಹಾಬಾದ್ ಪೊಲೀಸ್ ಠಾಣೆಯ ಶೌಚಾಲಯದಲ್ಲಿ 20 ವರ್ಷದ ಆರೋಪಿ ಯುವಕ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನೀರಜ್ ಜದೌನ್ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಹಾಸನ | 3 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ
16 ವರ್ಷದ ಬಾಲಕಿಯೊಂದಿಗೆ ಊರು ಬಿಟ್ಟು ಹೋದ ಹಿನ್ನೆಲೆ ಪೋಕ್ಸೋ ಪ್ರಕರಣದಲ್ಲಿ ರವಿ ರಜಪೂತ್ ಎಂಬ ಯುವಕನನ್ನು ಬಂಧಿಸಲಾಗಿತ್ತು. ಭಾನುವಾರ ಪೊಲೀಸ್ ಠಾಣೆಯ ಶೌಚಾಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.
ರಜಪೂತ್ ಅವರನ್ನು ಶಹಾಬಾದ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು ವೈದ್ಯರು ರಜಪೂತ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸಾವಿನ ಸುದ್ದಿ ತಿಳಿದ ರಜಪೂತ್ ಅವರ ಕುಟುಂಬ ಮತ್ತು ಸಂಬಂಧಿಕರು ಪೊಲೀಸ್ ಠಾಣೆಗೆ ಧಾವಿಸಿದ್ದಾರೆ.
“ಸದ್ಯ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರ ನಿಖರವಾದ ಕಾರಣವನ್ನು ಸ್ಪಷ್ಟಪಡಿಸಲಾಗುತ್ತದೆ” ಎಂದು ನೀರಜ್ ಜದೌನ್ ಹೇಳಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
