ಹಾವೇರಿ | ರಸ್ತೆ ಅಪಘಾತ: ಬೈಕ್‌ನಿಂದ ಬಿದ್ದು ಮಹಿಳೆ ಸಾವು

Date:

Advertisements

ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡ ಪ್ರೇಮಾ ಮಲ್ಲಿಕಾರ್ಜುನ ಸುಳ್ಳಳ್ಳಿ (45) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಪಿ.ಬಿ.ರಸ್ತೆಯಲ್ಲಿ ನಡೆದಿದೆ.

ಬಸವೇಶ್ವರನಗರದ 1ನೇ ಕ್ರಾಸ್ ನಿವಾಸಿ ಪ್ರೇಮಾ ಅವರು ಆ. 29ರಂದು ಬೈಕ್‌ನಲ್ಲಿ ಹೊರಟಿದ್ದಾಗ ಹಳೇ ಪಿ.ಬಿ.ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಈ ಅವಘಡ ಸಂಭವಿಸಿದೆ. 

ಅಪಘಾತಕ್ಕೆ ಕಾರಣರಾದ ಆರೋಪದಡಿ ಅವರ ಮಗ ಕರಬಸು ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹಾವೇರಿ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಆರೋಪಿ ಕರಬಸು, ತಮ್ಮ ತಾಯಿ ಪ್ರೇಮಾ ಅವರನ್ನು ಬೈಕ್‌ನಲ್ಲಿ ಹತ್ತಿಸಿಕೊಂಡು ಮೋಟೆಬೆನ್ನೂರು ಕಡೆಯಿಂದ ಹಳೇ ಪಿ.ಬಿ.ರಸ್ತೆ ಮೂಲಕ ಹಾವೇರಿಗೆ ಬಂದಿದ್ದರು. ಮಾರ್ಗಮಧ್ಯೆ ಅತೀ ವೇಗವಾಗಿ ಬೈಕ್ ಚಲಾಯಿಸಿದ್ದರು. ಇದರಿಂದಾಗಿ ಬೈಕ್‌ನಿಂದ ರಸ್ತೆಗೆ ಬಿದ್ದಿದ್ದ ಪ್ರೇಮಾ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹುಬ್ಬಳ್ಳಿ ಖಾಸಗಿ ಆಸ್ಪತ್ರೆ, ಅಲ್ಲಿಂದ ಕಿಮ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿಯೇ ಪ್ರೇಮಾ ತೀರಿಕೊಂಡಿದ್ದಾರೆ”ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X