ರಾಹುಲ್ ಗಾಂಧಿ ಕೋಲಾರ ಭೇಟಿ ಮುಂದೂಡಿಕೆ

Date:

Advertisements
  • ಕೋಲಾರದಿಂದಲೇ ರಾಹುಲ್ ಗಾಂಧಿ ಪ್ರಚಾರ ಆರಂಭ
  • ಪ್ರಧಾನಿ ಮೋದಿ ವಿರುದ್ಧ ಸಲೀಂ ಅಹ್ಮದ್‌ ವಾಗ್ದಾಳಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೋಲಾರಕ್ಕೆ ಆಗಮಿಸುವ ದಿನಾಂಕವನ್ನು ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ. ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಭಾಗವಹಿಸಲು ಏಪ್ರಿಲ್ 5ರಂದು ರಾಜ್ಯಕ್ಕೆ ಬರಬೇಕಾಗಿತ್ತು.

ಕಾಂಗ್ರೆಸ್‌ನ ‘ಸತ್ಯಮೇವ ಜಯತೇ’ ಸಮಾವೇಶದಲ್ಲಿ ಪಾಲ್ಗೊಳ್ಳಲು ಏಪ್ರಿಲ್ 5ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ರಾಹುಲ್ ಗಾಂಧಿ ಅವರ ಬರುವಿಕೆ ಏಪ್ರಿಲ್‌ 9ಕ್ಕೆ ಮುಂದೂಡಲಾಗಿದೆ.

ಈ ಕುರಿತು ಸುದ್ದಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, “ರಾಹುಲ್‌ ಗಾಂಧಿ ಕಾರ್ಯಕ್ರಮವನ್ನು ಏ. 9ಕ್ಕೆ ನಿಗದಿಪಡಿಸಲಾಗಿದೆ. ಇನ್ನುಳಿದ ವಿಚಾರಗಳ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದ್ದೇವೆ” ಎಂದು ತಿಳಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯ ವೇಳೆ ರಾಹುಲ್ ಗಾಂಧಿ ಕೋಲಾರದಲ್ಲಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಈಗ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಸಂಸತ್ ಸದಸ್ಯ ಸ್ಥಾನದಿಂದಲೂ ಅನರ್ಹಗೊಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಹೆಸರಿನ ಮತ್ತೊಬ್ಬ ಅಭ್ಯರ್ಥಿ ಅನರ್ಹ

ಈ ನಡುವೆ ರಾಹುಲ್ ಗಾಂಧಿ ರಾಜ್ಯ ವಿಧಾನಸಭಾ ಚುನಾವಣೆಗೆ ಕೋಲಾರದಿಂದಲೇ ಪ್ರಚಾರ ಕಾರ್ಯ ಆರಂಭಿಸುತ್ತಿರುವುದು ಕಾಂಗ್ರೆಸ್‌ಗೆ ಮಹತ್ವದ್ದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ರಾಮರಾಜ್ಯ ಹೇಳಿಕೆ ಉಲ್ಲೇಖಿಸಿದ ಸಲೀಂ ಅಹ್ಮದ್‌, “ದೇಶದಲ್ಲಿ ಪ್ರಜಾಪ್ರಭುತ್ವ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡುತ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಅವರು ರಾಮರಾಜ್ಯ ಮಾಡುವುದಾಗಿ ಹೇಳಿದ್ದರು. ಆದರೆ, ಈಗ ರಾವಣ ರಾಜ್ಯ ಮಾಡಿದ್ದಾರೆ. ಸ್ವರ್ಗ ತೋರಿಸುವುದಾಗಿ ಹೇಳಿ ನರಕ ತೋರಿಸುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ರಾಹುಲ್‌ ವಿರುದ್ಧ ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಇದಕ್ಕೆಲ್ಲಾ ಕಾಂಗ್ರೆಸ್‌ ಹೆದರುವುದಿಲ್ಲ. ಎಲ್ಲಿ ಹೋರಾಟ ಆರಂಭವಾಯಿತೋ ಅಲ್ಲಿಂದ ಮತ್ತೆ ಹೋರಾಟ ಆರಂಭಿಸಲು ಸಮಾವೇಶ ಹಮ್ಮಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ...

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು...

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

Download Eedina App Android / iOS

X