ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ, ಡೋಂಗಿತನ ಅಷ್ಟೇ: ಸಿಎಂ ಸಿದ್ದರಾಮಯ್ಯ ಕಿಡಿ

Date:

Advertisements

ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಅವರ ಡೋಂಗಿತನ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.‌

ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ, “ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ” ಎಂದರು.

ಬಾನು ಮುಷ್ತಾಕ್ ಅವರಿಗೆ ಉದ್ಘಾಟನೆಗೆ ಆಹ್ವಾನ

“ಬಾನು ಮುಷ್ತಾಕ್ ಅವರಿಗೆ ಬೂಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ. ದಸರಾ ಹಬ್ಬದ ಮೇಲೆ ಈ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ ಎಂದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ” ಎಂದು ಹೇಳಿದರು.

“ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ. ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ” ಎಂದು ಇದೇ ವೇಳೆ ತಿಳಿಸಿದರು.

“ಪ್ರಾರ್ಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಇಲ್ಲಿ ನಡೆಯುತ್ತಿದೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಪದವಿ ಕೋರ್ಸು ತೆರೆದಿಲ್ಲ ಎಂದರು. ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರಗಳು ಇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X