ಮೂರ್ಖರಿಗೆ ನುಡಿಗಟ್ಟುಗಳು ಅರ್ಥವಾಗಲ್ಲ: ಎಫ್‌ಐಆರ್ ಬೆನ್ನಲ್ಲೇ ಮಹುವಾ ಮೊಯಿತ್ರಾ ಟೀಕೆ

Date:

Advertisements

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಬಗ್ಗೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಭಾನುವಾರ ಬಿಜೆಪಿಯನ್ನು, ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಮೂರ್ಖರಿಗೆ ನುಡಿಗಟ್ಟುಗಳು ಅರ್ಥವಾಗಲ್ಲ” ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಪತ್ರಕರ್ತರು ಸಂಸದೆ ಮೊಯಿತ್ರಾಗೆ ರಾಜ್ಯದಲ್ಲಿ ಅಕ್ರಮ ಒಳನುಸುಳುವಿಕೆಯ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ್ದ ಮೊಯಿತ್ರಾ, “ಬಾಂಗ್ಲಾದೇಶದಿಂದ ನುಸುಳುವಿಕೆಯನ್ನು ತಡೆಯುವಲ್ಲಿ ಅಮಿತ್ ಶಾ ವಿಫಲರಾಗಿದ್ದು, ಅವರ ತಲೆಯನ್ನು ಕತ್ತರಿಸಿ ಮೇಜಿನ ಮೇಲೆ ಇಡಬೇಕು” ಎಂದು ಬಂಗಾಳಿ ಭಾಷೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್

ಈ ಹಿನ್ನೆಲೆ ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ, ಶನಿವಾರ ರಾಯ್‌ಪುರದ ಮಾನಾ ಪೊಲೀಸ್ ಠಾಣೆಯಲ್ಲಿ ಮೊಯಿತ್ರಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 196(ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 197 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ವಿಡಿಯೋ ಹೇಳಿಕೆಯನ್ನು ನೀಡಿರುವ ಮೊಯಿತ್ರಾ, “ಮೂರ್ಖರಿಗೆ ನುಡಿಗಟ್ಟುಗಳು ಅರ್ಥವಾಗಲ್ಲ, ‘ತಲೆಗಳು ಉರುಳುತ್ತವೆ’ ಎಂದು ಹೇಳುವುದರಿಂದ ನಿಜವಾಗಿಯೂ ಯಾರೊಬ್ಬರ ತಲೆಯನ್ನು ಕತ್ತರಿಸುವುದು ಎಂದು ಅರ್ಥವಲ್ಲ. ಇದು ರೂಪಕ. ಅಕ್ಷರಶಃ ಅನ್ವಯಿಸುವುದಿಲ್ಲ. ಒಬ್ಬರ ಜವಾಬ್ದಾರಿಯ ಮೇಲೆ ಹೊಣೆಗಾರಿಕೆಯನ್ನು ನಾವು ಬಯಸುವುದಾಗಿ ಹೇಳುವ ನುಡಿಗಟ್ಟಿದು. ನೀವು (ರಾಯ್‌ಪುರ ಪೊಲೀಸರು) ಗೂಗಲ್ ಅನುವಾದವನ್ನು ಬಳಸಿಕೊಂಡು ನಕಲಿ ಎಫ್‌ಐಆರ್ ದಾಖಲಿಸಿದ್ದೀರಿ” ಎಂದು ಆರೋಪಿಸಿದ್ದಾರೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

Download Eedina App Android / iOS

X