ಸೋಮವಾರ ಬೆಳಗಿನ ಜಾವ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800ಕ್ಕೂ ಜನರು ಸಾವನ್ನಪ್ಪಿದ್ದಾರೆ. ಮತ್ತು 2500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಭಾನುವಾರ ರಾತ್ರಿ ಸ್ಥಳೀಯ ಸಮಯ ರಾತ್ರಿ 11.47 ಕ್ಕೆ ಪೂರ್ವ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಹೆಚ್ಚಿನ ಸಾವುನೋವುಗಳು ಕುನಾರ್ ಪ್ರಾಂತ್ಯದಿಂದಲೇ ಬಂದಿವೆ.
ನೆರೆಯ ನಂಗಾಹರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್‌ನ ಹಲವಾರು ಪಟ್ಟಣಗಳಲ್ಲಿ ಈ ಭೂಕಂಪವು ಅಪ್ಪಳಿಸಿದೆ. ಕಾಬೂಲ್‌ನಿಂದ ನೆರೆಯ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ವರೆಗೆ ಕಟ್ಟಡಗಳು ನಡುಗಿದ ವರದಿಯಾಗಿದೆ.
ಭೂಕಂಪದಿಂದಾಗಿ ಮನೆಯ ಛಾವಣಿ ಕುಸಿದು ಜನ ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಹಲವಾರು ಮಕ್ಕಳು ಗಾಯಗೊಂಡಿದ್ದಾರೆ. ಪೂರ್ವ ಅಫ್ಘಾನಿಸ್ತಾನದಾದ್ಯಂತ ಕೆಲವು ಸೆಕೆಂಡುಗಳ ಕಾಲ ಕಟ್ಟಡಗಳು ಕಂಪಿಸಿದವು, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸುಮಾರು 370 ಕಿ.ಮೀ ದೂರದಲ್ಲಿ ಕಂಪನದ ಅನುಭವವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಭೂಕಂಪ 00:47:41 ISTಕ್ಕೆ ಸಂಭವಿಸಿದೆ. ಇದರ ಕೇಂದ್ರಬಿಂದುವು 34.50°N ಅಕ್ಷಾಂಶ ಮತ್ತು 70.81°E ರೇಖಾಂಶದಲ್ಲಿ, 160 ಕಿ.ಮೀ ಆಳದಲ್ಲಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ಹಂಚಿಕೊಂಡಿದೆ.