ಶಿವಮೊಗ್ಗ | ಸೆ. 3- 14 | ಜಮಾಅತೆ ಇಸ್ಲಾಮಿ ಹಿಂದ್‌ನಿಂದ ರಾಜ್ಯಾದ್ಯಂತ ‘ನ್ಯಾಯದ ಹರಿಕಾರ, ಪೈಗಂಬರ್ ಮುಹಮ್ಮದ್’ ಅಭಿಯಾನ

Date:

Advertisements

ಶಿವಮೊಗ, ಪ್ರವಾದಿ ಮುಹಮ್ಮದ್ ರವರ ಸಾರ್ವಕಾಲಿಕ ನ್ಯಾಯದ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ಹರಿಕಾರ ಪೈಗಂಬರ್ ಮುಹಮ್ಮದ್ ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾರ್ಯಕ್ರಮದ ಸಂಚಾಲಕ ಮಹಮ್ಮದ್ ಇಲಿಯಾಸ್, ಪ್ರವಾದಿ ಮುಹಮ್ಮದ್ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

ಈ ಅಭಿಯಾನದ ಪುಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು ಎಂದರು.

ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ.ಶಿವಮೊಗ್ಗದಲ್ಲಿ ಪ್ರಬಂಧ ಸ್ಪಧೆ, ಶಿವಮೊಗ್ಗ ನಗರದ ಗಣ್ಯ ವ್ಯಕ್ತಿಗಳಿಂದ ಭೇಟಿ, ಸ್ವಚ್ಛತಾ ಕಾರ್ಯಕ್ರಮ, ಸೀರತ್ ಪ್ರವಚನ, ಅನಾಥ ಆಶ್ರಮ ಮತ್ತು ಹಾಸ್ಪಿಟಲ್ ಭೇಟಿ ನಡೆಯಲಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X