ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಕೆ; ಸಾರ್ವಜನಿಕರ ಆಕ್ರೋಶ

Date:

Advertisements

ಗಣೇಶ ಚತುರ್ಥಿ ಪ್ರತಿಷ್ಠಾಪನೆ ದಿನ ಹಾಗೂ ವಿಸರ್ಜನೆ ದಿನ ಡಿಜೆ ಬಳಕೆಗೆ ಸುಪ್ರೀಂಕೋರ್ಟ್ ನಿಷೇಧದ ಆದೇಶ ಹೊರಡಿಸಿದ್ದರೂ ಕೊಪ್ಪಳ ಜಿಲ್ಲೆಯ ಭಾಗ್ಯನಗರದಲ್ಲಿ ಗಣೇಶ ವಿಸರ್ಜನೆ ದಿನ (ನಿನ್ನೆ ರಾತ್ರಿ 12-15ರವರೆಗೂ) ಡಿಜೆ ಬಳಕೆ ಮಾಡಿದ್ದು, ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಧಾರ್ಮಿಕ ಮುಖಂಡರ ಹಾಗೂ ಎಲ್ಲಾ ಧಾರ್ಮಿಕ ಸಂಘಟನೆಗಳಿಗೆ ಶಾಂತಿ ಸಭೆ ಕರೆದು ಡಿಜೆ ಸಿಸ್ಟಮ್‌ಗಳನ್ನು ಬಳಸುವಂತಿಲ್ಲ ಎಂದು ಕಡ್ಡಾಯವಾಗಿ ಸೂಚನೆ ನೀಡಿದ್ದರು. ಆದರೂ ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಡಿಜೆ ಸಿಸ್ಟಮ್‌ನ ಕರ್ಕಶ ಶಬ್ದಕ್ಕೆ ಹೃದ್ರೋಗ ಪೀಡಿತರು, ಗರ್ಭಿಣಿಯರು, ಹಸುಗೂಸುಗಳು ಭಯಗೊಳ್ಳುವಂತ ವಾತಾವರಣ ಸೃಷ್ಟಿಯಾಗಿತ್ತು.

ಡಿಜೆಯ ಅತಿಯಾದ ಶಬ್ದಕ್ಕೆ ಮನೆಯೊಳಗಿನ ಪರಿಕರಗಳು ಅಲ್ಲಾಡುತ್ತಿದ್ದವು. ಮನೆಯ ಅಂಗಳಗಳು ದಗ್‌ ದಗ್ ಎಂದು ಶಬ್ದ ಮಾಡುತ್ತಿದ್ದವು. ನ್ಯಾಯಾಲಯದ ನಿಷೇಧದ ಆದೇಶವಿದ್ದರೂ ಪೊಲೀಸ್ ಮೌನವಹಿಸಿದ್ಯಾಕೆ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಆಟೋ ಪಲ್ಟಿ : 65 ವರ್ಷದ ಮಹಿಳೆ ಸಾವು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X