ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಲಭ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅವರು ಇಂದು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಪ್ರಕಾರ, ಬೆಳಿಗ್ಗೆ ಹಾಗೂ ಸಂಜೆ ವೇಳೆ ಬಸ್ ಸೌಲಭ್ಯ ಲಭ್ಯವಿಲ್ಲದ ಕಾರಣ ಪ್ರತಿದಿನವೂ ಶಾಲೆ-ಕಾಲೇಜುಗಳಿಗೆ ಹೋಗುವಲ್ಲಿ ಅಡಚಣೆ ಎದುರಾಗುತ್ತಿದೆ. ಅನೇಕ ಬಾರಿ ಸಾರಿಗೆ ಇಲಾಖೆಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿಯದ ಕಾರಣ ತೀವ್ರ ಅಸಮಾಧಾನಗೊಂಡ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಗಣೇಶ ವಿಸರ್ಜನೆ ವೇಳೆ ಗುಂಪುಗಳ ನಡುವೆ ಗಲಾಟೆ
ರಸ್ತೆ ತಡೆದ ಪರಿಣಾಮವಾಗಿ ನಾಲ್ಕೈದು ತಾಸು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳಕ್ಕೆ ಲಿಂಗಸೂಗೂರು ಡಿಪೋ ಮ್ಯಾನೇಜರ್ ಆಗಮಿಸಿ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಹಾಗೂ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಭರವಸೆ ನೀಡಿದ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

