ಚಾಮರಾಜನಗರ | ನಗರಸಭೆ ಪೌರಾಯುಕ್ತ ರಾಮದಾಸ್ ಕರ್ತವ್ಯದಿಂದ ಬಿಡುಗಡೆ

Date:

Advertisements

ಚಾಮರಾಜನಗರ ನಗರಸಭೆ ಪೌರಾಯುಕ್ತ ಎಸ್. ವಿ. ರಾಮದಾಸ್ ಅವರನ್ನು ಕರ್ತವ್ಯಲೋಪ ಹಾಗೂ ಪೌರಾಯುಕ್ತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸದೆ ಇರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಹುದ್ದೆಯಾದ ತೋಟಗಾರಿಕೆ ಇಲಾಖೆಯ ಸಕ್ಷಮ ಪ್ರಾಧಿಕಾರದಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ.

ರಾಮದಾಸ್ ಅವರ ವಿರುದ್ಧ ಹಲವಾರು ಆರೋಪಗಳಿವೆ. ಪ್ರಮುಖವಾಗಿ ನಗರಸಭೆ ಕೌನ್ಸಿಲ್ ಸಭೆಯಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದ ಕಾಮಗಾರಿಗಳ ಬದಲಾಗಿ, ತಮಗೆ ಅನುಕೂಲವಾದ ಕಾಮಗಾರಿಗಳನ್ನು ಕೌನ್ಸಿಲ್ ಗಮನಕ್ಕೆ ತರದೆಯೇ ಬದಲಾಯಿಸಿಕೊಂಡು, ನಖಲಿ ನಡಾವಳಿಗಳನ್ನು ಸಲ್ಲಿಸಿ ಅಧಿಕಾರ ದುರುಪಯೋಗ ಮಾಡಿರುವ ಬಗ್ಗೆ ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಯವರಿಗೆ ದಾಖಲೆ ಸಮೇತ ದೂರು ನೀಡಿದ್ದರು.

ಇದಲ್ಲದೇ, ಚಾಮರಾಜನಗರ ಪಟ್ಟಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡುವ ಲೈನ್ ಪದೇ ಪದೇ ದುರಸ್ಥಿಯಾಗುತ್ತಿದ್ದರು ಯಾವುದೇ ಕ್ರಮ ಕೈಗೊಳ್ಳದೆ ವಿಫಲರಾಗಿದ್ದರು. ಪ್ರಾದೇಶಿಕ ಆಯುಕ್ತರ ನ್ಯಾಯಾಲಯಕ್ಕೆ ದಾಖಲಾತಿ ಸಲ್ಲಿಸದೇ ನ್ಯಾಯಾಲಯಕ್ಕೆ ಅಗೌರವ ತೋರಿದ್ದಾರೆ ಎನ್ನಲಾಗಿದೆ. 15 ನೇ ಹಣಕಾಸು ಆಯೋಗದ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡದೆ ನಿರ್ಲಕ್ಷ್ಯ ವಹಿಸಿರುವುದು ಸೇರಿದಂತೆ ಅನೇಕ ಕರ್ತವ್ಯಲೋಪ ಎಸಗಿರುವುದನ್ನು ಜಿಲ್ಲಾಧಿಕಾರಿಯವರು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ.

ಸಫಾಯಿ ಕರ್ಮಚಾರಿಗಳಿಗೆ ಮನೆ ನಿರ್ಮಿಸಲು ಸೂಕ್ತ ನಿವೇಶನ ಗುರುತಿಸದೇ ಇರುವುದು, ಪೌರ ಕಾರ್ಮಿಕರಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸದೆ ಇರುವುದು, ನ್ಯಾಯಾಲಯ ರಸ್ತೆ ಪೂರ್ಣಗೊಳಿಸುವಂತೆ ಆದೇಶ ಪಾಲನೆ ಮಾಡದಿರುವುದು, ಜೊತೆಗೆ ನ್ಯಾಯಾಲಯ ರಸ್ತೆ ಅಭಿವೃದ್ಧಿ ಪಡಿಸಲು ಭೂ ಸ್ವಾಧೀನ ಕೈಗೊಳ್ಳಬೇಕಿದ್ದ ಕಟ್ಟಡ, ಮನೆ ಮಾಲೀಕರಿಂದ ಅನುಮತಿ, ಪಾರದರ್ಶಕತೆ ಕಾಯ್ದುಕೊಂಡು ಸೂಕ್ತ ಪರಿಹಾರ ನಿಗದಿಗೊಳಿಸುವ ಹೊಣೆಗಾರಿಕೆ ನಿಭಾಯಿಸದೆ ನಿರ್ಲಕ್ಷ್ಯ ವಹಿಸಿದ್ದು ಸಾಬೀತಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇ ಖಾತಾ ಅಭಿಯಾನವನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಆಸ್ತಿ, ಇ ಖಾತೆ ನೀಡುವಂತೆ ನಿರ್ದೇಶನವಿದ್ದರೂ ಒಟ್ಟು 4787 ಅನಧಿಕೃತ ಆಸ್ತಿಗಳಿಗೆ ಈವರೆಗೆ ಕೇವಲ 860 ಬಿ ಖಾತಾ ನೀಡಿ ಶೇ. 17% ರಷ್ಟು ಸಾಧನೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನಾನುಕೂಲ ಮಾಡಿರುವುದು ಸೇರಿದಂತೆ ಹಲವಾರು ವಿಷಯಗಳಲ್ಲಿ ಕರ್ತವ್ಯಲೋಪ ಹಾಗೂ ಜವಾಬ್ದಾರಿಯುತವಾಗಿ ಹುದ್ದೆ ನಿರ್ವಹಣೆ ಮಾಡದ ಕಾರಣಗಳಿಗಾಗಿ ಜಿಲ್ಲಾಧಿಕಾರಿ ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಮಾಡಿದ್ದಾರೆ.

ತೆರವಾದ ಸ್ಥಾನಕ್ಕೆ ನಗರಸಭೆ ಕಾರ್ಯಪಾಲಕ ಎಂಜಿನಿಯರ್ ರೂಪ ಅವರನ್ನು ಪ್ರಭಾರ ಪೌರಾಯುಕ್ತರಾಗಿ ನೇಮಕ ಮಾಡಲಾಗಿದ್ದು, ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಜೆಎಸ್ಎಸ್ ವತಿಯಿಂದ ‘ಮೆಡೈಕ್ ಇನ್ನೊವೇಶನ್-ಪ್ರತಿಭಾ ಅಭಿವೃದ್ದಿ’ ಕಾರ್ಯಕ್ರಮ

ಕೊಡಗಿನಲ್ಲೂ ಲೋಪ ಸಾಬೀತು :

ಇದೇ ಎಸ್. ವಿ. ರಾಮದಾಸ್ ಅವರು ಕೊಡಗು ಜಿಲ್ಲೆ ಮಡಿಕೇರಿ ನಗರಸಭೆ ಪೌರಾಯುಕ್ತರಾಗಿದ್ದ ಸಂದರ್ಭದಲ್ಲಿ ಒಂದೇ ಕಾಮಗಾರಿಗೆ ಎರಡು ಬಿಲ್ ಮಾಡಿಕೊಟ್ಟಿರುವ ಆರೋಪ ಸಾಬೀತಾಗಿದೆ. ಈ ಕುರಿತಾಗಿ ನಗರಸಭೆ ಸದಸ್ಯ ಅಮೀನ್ ಮೋಹಿಸಿನ್ ಅವರು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ದೂರು ನೀಡಿದ್ದರಿಂದ ತನಿಖೆ ನಡೆದು ಸಾಬೀತಾಗಿತ್ತು. ಈ ಕುರಿತಾಗಿ ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X