ದಾವಣಗೆರೆ | ವಿದ್ಯಾರ್ಥಿಗಳ ಅನುಕೂಲಕ್ಕೆ ಮಾದಿಹಳ್ಳಿಗೆ ಬಸ್ ಸೇವೆಗೆ ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ಗೆ ಎಐಡಿಎಸ್ಓ ಮನವಿ

Date:

Advertisements

ಮಾದಿಹಳ್ಳಿ ಗ್ರಾಮದಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿನಿತ್ಯ ಕಾಲೇಜಿಗೆ ತೆರಳಲು ಸರ್ಕಾರಿ ಬಸ್ಸುಗಳ ಮೇಲೆ ಅವಲಂಬಿತರಾಗಿದ್ದಾರೆ. ಮುಂಜಾನೆ 6ಕ್ಕೆ ಹೊರಡುವ ಬಸ್ಸು ಹೆಚ್ಚು ಜನಸಂದಣಿಯಿಂದ ಭರ್ತಿಯಾಗುವ ಕಾರಣ ಬಹುತೇಕ ವಿದ್ಯಾರ್ಥಿಗಳು ಬಸ್ ಹತ್ತಲಾಗದೇ ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳ ಶಾಲಾ ಸಮಯ ಮತ್ತು ಅನುಕೂಲಕ್ಕಾಗಿ ಬಸ್ ಸೇವೆ ಒದಗಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಎಐಡಿಎಸ್ಓ ಜಿಲ್ಲಾ ಸಮಿತಿ ಕಾರ್ಯಕರ್ತರು, ವಿದ್ಯಾರ್ಥಿಗಳು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳಿಗೆ ಮನವಿ ಮಾಡಿದರು.

ಮುಂಜಾನೆ 6 ರೈ ನಂತರ ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಇರದ ಕಾರಣ ಹಲವು ಬಾರಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೇ, ಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಹಳ್ಳಿಯಿಂದ ಹೊರಡುವ ಬಹುತೇಕ ಮಕ್ಕಳು ಬಡ ಕುಟುಂಬದಿಂದ ಬಂದಿದ್ದು, ಕೂಲಿ ಹಾಗೂ ರೈತಾಪಿ ಮನೆತನದಿಂದ ಓದುವ ಆಸೆ ಹೊತ್ತು ನಗರದ ಕಡೆಗೆ ಮುಖ ಮಾಡುವಂತಾಗಿದೆ. ಈ ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ಶಾಲಾ ಕಾಲೇಜಿಗೆ ತೆರಳಲು ಸಮರ್ಪಕ ಬಸ್ಸಿನ ವ್ಯವಸ್ಥೆಯನ್ನು ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.‌

ಈ ವೇಳೆ ಮಾತನಾಡಿದ ಅಧ್ಯಕ್ಷೆ ಪೂಜಾ ನಂದಿಹಳ್ಳಿ “ಮಾದಿಹಳ್ಳಿಯಿಂದ ಇರುವ ಒಂದೇ ಬಸ್ಸು ಬೆಳಿಗ್ಗೆ 6ಕ್ಕೆ ಹೊರಡುವ ಕಾರಣ ಬಹುತೇಕ ಮಕ್ಕಳು ಉಪಹಾರವನ್ನು ಮಾಡದೆ ಹಾಗೆಯೇ ಬರುವುದುಂಟು. ಶಾಲಾಕಾಲೇಜಿನ ಸಮಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಇನ್ನೊಂದು ಬಸ್  ಬಿಡಬೇಕು.‌ ಮತ್ತು ಹಿಂದಿರುಗಲು ಸಂಜೆ ಇನ್ನೊಂದು ಬಸ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು.‌

ವಿದ್ಯಾರ್ಥಿಗಳ ಆಗ್ರಹಕ್ಕೆ ಸ್ಪಂದಿಸಿದ ವಿಭಾಗಿಯ ಸಂಚಾರ ಅಧಿಕಾರಿಗಳು, ಈಗ ಇರುವ 6 ಗಂಟೆ ಬಸ್ ನೊಂದಿಗೆ ಬೆಳಿಗ್ಗೆ 7.30ಕ್ಕೆ ಮಾದಿಹಳ್ಳಿಯಿಂದ ದಾವಣಗೆರೆಗೆ ಹಾಗೂ ಸಂಜೆ 4.30ಕ್ಕೆ ದಾವಣಗೆರೆಯಿಂದ ಮಾದಿಹಳ್ಳಿಗೆ ಬಸ್ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ ? ಚಿತ್ರದುರ್ಗ | ಭಾರತದ ಜಾತಿಗಳು ಹೋಮೋಜೀನಿಯಸ್‌ ಅಲ್ಲ, ಹೆಟ್ರೋ ಜೀನಿಯಸ್; ಚಿಂತಕ ವಿ ಎಲ್ ನರಸಿಂಹಮೂರ್ತಿ

ಎಐಡಿಎಸ್ಓ ಸಂಘಟನೆಯ ಜಿಲ್ಲಾಧ್ಯಕ್ಷರಾದ ಪೂಜಾ ನಂದಿಹಳ್ಳಿ, ವಿದ್ಯಾರ್ಥಿಗಳಾದ ಪಿ ಸಿದ್ದೇಶ, ಹೇಮಂತ, ಅಂಜಿನಪ್ಪ, ಮುರುಳೀಧರ, ರಾಕೇಶ ಮುಂತಾದವರು ಉಪಸ್ಥಿತರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

Download Eedina App Android / iOS

X