ಬಳ್ಳಾರಿ | ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ನಿವಾರಣೆಗೆ ಎಐಡಿಎಸ್‌ಒ ಆಗ್ರಹ

Date:

Advertisements

ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಬಳ್ಳಾರಿಯ ಎಸ್‌ಜಿ‌ಆರ್‌ಸಿಎಮ್ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂದೆ ವಿದ್ಯಾರ್ಥಿಗಳು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ರಾಜ್ಯ ಖಜಾಂಚಿ ಸುಭಾಷ್ ಬಿ ಜಿ ಮಾತನಾಡಿ, “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಸಾಕಷ್ಟು ಆತಂಕದಲ್ಲಿದೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ” ಎಂದು ಆತಂಕ ವ್ಯಕ್ತಪಡಿಸಿದರು.

“ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದ್ದಾಗಲೂ ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು” ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿ | ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನ; ವಿವಿಧೆಡೆ ದಾಳಿ ನಡೆಸಿ 3 ಬಾಲ ಕಾರ್ಮಿಕರ ರಕ್ಷಣೆ

ಎಐಡಿಎಸ್ಒ ಜಿಲ್ಲಾ ಅಧ್ಯಕ್ಷ ಕೆ ಈರಣ್ಣ, ಮಂಜುನಾಥ ಕಂಬಳಿ, ನರೇಂದ್ರ, ಭೀಮಣ್ಣ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X