ಕೊಡಗು | ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ : ನೂತನ ಡಿಡಿಪಿಐ ಬಸವರಾಜು

Date:

Advertisements

ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ‌ ಉಪ ನಿರ್ದೇಶಕರಾಗಿ (ಡಿಡಿಪಿಐ) ಬಸವರಾಜುರವರು ಸೋಮವಾರ ಅಧಿಕಾರ ಸ್ವೀಕರಿಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವುದಾಗಿ ಹೇಳಿದರು.

ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ ಸಿ. ರಂಗಧಾಮಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು. ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ ಕಾರ್ಯಕ್ರಮಗಳು, ಚಟುವಟಿಕೆಗಳನ್ನು ಉತ್ತಮವಾಗಿ ನಡೆಸುವ ಮೂಲಕ ಜಿಲ್ಲೆಯಲ್ಲಿ ಉತ್ತಮವಾಗಿ ಶೈಕ್ಷಣಿಕ ಫಲಿತಾಂಶ ಕಾಣುವತ್ತ ಒತ್ತು ನೀಡಲಾಗುವುದು ಎಂದರು.

ಜಿಲ್ಲೆಯು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಗಳಿಸುತ್ತಾ ಬಂದಿದ್ದು, ಕಳೆದ ಸಲ ರಾಜ್ಯಕ್ಕೆ 4 ನೇ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯ. ಪ್ರಸಕ್ತ ಸಾಲಿನಲ್ಲಿ ಕೂಡ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಗೊಳಿಸಿ ಶೈಕ್ಷಣಿಕ ಪ್ರಗತಿಗೆ ಪ್ರಯತ್ನಿಸಲಾಗುವುದು ಎಂದರು.

ನಿರ್ಗಮಿತ ಡಿಡಿಪಿಐ ಸಿ. ರಂಗಧಾಮಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲಿ 4 ನೇ ಸ್ಥಾನ ಗಳಿಸಲು ಸಾಧ್ಯವಾಗಿದೆ. ಮುಂದುವರಿದಂತೆ ಉತ್ತಮ ಫಲಿತಾಂಶ ಕಾಣುವಾಂತಾಗಲಿ ಎಂದು ಆಶಿಸಿದರು. ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನ ಪ್ರಾಂಶುಪಾಲ ಡಿ. ಉದಯ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ಎಲ್ಲರೂ ಒಗ್ಗೂಡಿ ಶ್ರಮಿಸಿದರೆ ಉತ್ತಮ ಸಾಧನೆ ಪಡೆಯಲು ಸಾಧ್ಯ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ನಗರಸಭೆ ಪೌರಾಯುಕ್ತ ರಾಮದಾಸ್ ಕರ್ತವ್ಯದಿಂದ ಬಿಡುಗಡೆ

ಡಿವೈಪಿಸಿಗಳಾದ ಎಂ. ಕೃಷ್ಣಪ್ಪ, ಸೌಮ್ಯ ಪೊನ್ನಪ್ಪ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಕಛೇರಿಯ ಪತ್ರಾಂಕಿತ ಅಧಿಕಾರಿ ಪಿ. ಎಸ್. ನಟರಾಜ್, ನಿವೃತ್ತ ಶಿಕ್ಷಣಾಧಿಕಾರಿಗಳಾದ ಎಂ.ಮಹಾದೇವಸ್ವಾಮಿ, ಶಿವಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ. ಟಿ. ಸೋಮಶೇಖರ್, ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ. ಪಿ. ಗುರುರಾಜ್, ಕಛೇರಿಗೆ ನೂತನವಾಗಿ ಆಗಮಿಸಿದ ವೃತ್ತಿ ಶಿಕ್ಷಣ ವಿಭಾಗದ ಪರಿವೀಕ್ಷಕಿ ಶರ್ಮಿಳಾ, ಕಛೇರಿ ಅಧಿಕಾರಿ ವರ್ಗ ಮತ್ತು ಸಿಬ್ಬಂದಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

Download Eedina App Android / iOS

X