‘ಭಾರತದಲ್ಲಿ ಜಾತಿಗಳು: ಅವುಗಳ ರಚನಾಕ್ರಮ, ಉತ್ಪತ್ತಿ ಹಾಗೂ ವಿಕಾಸ’ (Castes in India: Their Mechanism, Genesis and Development) ಕೃತಿಯು ಅಂಬೇಡ್ಕರ್ ಅವರು ನಡೆಸಿದ ಮಹತ್ವದ ಸಂಶೋಧನೆಗಳಲ್ಲಿ ಒಂದು. ಈ ಪುಸ್ತಕದ ವಸ್ತುವಿನ ವಿವರಣೆ, ಚಾರಿತ್ರಿಕ ಹಿನ್ನೆಲೆ ಮತ್ತು ಅದರ ಸಮಕಾಲೀನ ಮಹತ್ವದ ಬಗ್ಗೆ ತಿಳಿಸಿಕೊಡುವ ಉದ್ದೇಶವನ್ನು ಈ ಕಿರು ಲೇಖನ ಹೊಂದಿದೆ. 1916ರ ಮೇ 9ರಂದು ಅಮೆರಿಕದ ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ಮಾನವ ಕುಲಶಾಸ್ತ್ರೀಯ ಸಮ್ಮೇಳನದಲ್ಲಿ ತಮ್ಮ 24ನೇ ವಯಸ್ಸಿನಲ್ಲಿ ಡಾಕ್ಟರೇಟ್ ಪದವಿಯ ಭಾಗವಾಗಿ…

ಡಾ ಸಬಿತಾ ಕೊರಗ
ಡಾ.ಸಬಿತಾ ಅವರು ಉಡುಪಿ ಜಿಲ್ಲೆಯ ಸಾಸ್ತಾನ ಸಮೀಪದ ಗುಂಡ್ಮಿಯವರು. ಕೊರಗ ಸಮುದಾಯದಲ್ಲಿ ಡಾಕ್ಟರೇಟ್ ಪಡೆದ ಪ್ರಥಮ ಮಹಿಳೆಯಾಗಿದ್ದಾರೆ. ಮಂಗಳೂರು ವಿವಿಯಿಂದ ಸಮಾಜಶಾಸ್ತ್ರದಲ್ಲಿ ಎಂ.ಎ. ಪದವಿ, 'ಇವ್ಯಾಲ್ಯುವೇಶನ್ ಆಫ್ ಪಾಲಿಸಿಸ್ ಆ್ಯಂಡ್ ಪ್ರೋಗ್ರಾಮ್ಸ್ ಆಫ್ ಡೆವಲಪ್‌ಮೆಂಟ್ ಆಫ್ ಕರ್ನಾಟಕ ಸ್ಟೇಟ್ -ಎ ಸಿಚ್ಯುವೇಶನ್ ಅನಾಲಿಸಿಸ್' ಎಂಬ ಸಂಶೋಧನೆಗಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಹೊಸದಿಲ್ಲಿಯ ಜೆಎನ್‌ಯು ಸೇರಿದಂತೆ ರಾಜ್ಯದ ಪ್ರತಿಷ್ಠಿತ ವಿವಿ, ಕಾಲೇಜುಗಳಲ್ಲಿ ಕಾರ್ಯಾಗಾರ, ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ. ಸದ್ಯ ಮಂಗಳೂರು ವಿವಿಯಲ್ಲಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದಾರೆ.