ಮರಾಠ ಮೀಸಲಾತಿಗೆ ಸರ್ಕಾರ ಒಪ್ಪಿಗೆ: ಉಪವಾಸ ಕೈಬಿಟ್ಟ ಜರಾಂಗೆ

Date:

Advertisements

ಮಹಾರಾಷ್ಟ್ರ ಸರ್ಕಾರ ತಮ್ಮ ಪ್ರಮುಖ ಎರಡು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ಮರಾಠಿಗರಿಗೆ ಶೇ.10ರಷ್ಟು ಮೀಸಲಾತಿಗೆ ಆಗ್ರಹಿಸಿ ಮನೋಜ್ ಜರಾಂಗೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಮಂಗಳವಾರ ಸಂಜೆ ಕೈಬಿಟ್ಟಿರುವುದಾಗಿ ಘೋಷಿಸಿದ್ದಾರೆ.

“ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ಮಂಗಳವಾರ ಒಪ್ಪಿಕೊಂಡಿದೆ. ಸ್ನೇಹಿತರೇ ನಾವು ಗೆದ್ದುಬಿಟ್ಟೆವು” ಎಂದು ಹೋರಾಟಗಾರ ಮನೋಜ್ ಜರಾಂಗೆ ಹರ್ಷ ವ್ಯಕ್ತಪಡಿಸಿದರು.

ಕಳೆದ ಐದು ದಿನಗಳಿಂದ ಸಾವಿರಾರು ಹೋರಾಟಗಾರರೊಂದಿಗೆ ಜರಾಂಗೆ ಅವರು ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಐದು ದಿನದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಆಜಾದ್ ಮೈದಾನವನ್ನು ಖಾಲಿ ಮಾಡುವಂತೆ ಮುಂಬೈ ಪೊಲೀಸರು ಮಂಗಳವಾರ ಅವರಿಗೆ ನೋಟಿಸ್‌ ಜಾರಿಗೊಳಿಸಿದ್ದರು.

ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವವರು ಬಾಂಬೆ ಹೈಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಪೊಲೀಸರು ವಿಧಿಸಿದ್ದ ಪ್ರತಿಭಟನೆ ಪೂರ್ವ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜರಾಂಗೆ ಅವರಿಗೆ ನೋಟಿಸ್ ನೀಡಲಾಗಿತ್ತು.

ನಮ್ಮ ಪ್ರತಿಭಟನೆಗೆ ಸಂದ ಜಯವಾಗಿದೆ ಎಂದು ಜರಾಂಗೆ ಪ್ರ ತಿಕ್ರಿಯಿಸಿದ್ದಾರೆ. ಮರಾಠವಾಡ ಪ್ರದೇಶದ ಮರಾಠಿ ಸಮುದಾಯವನ್ನು ಕುಣಬಿಗಳೆಂದು ಗುರುತಿಸಬೇಕು ಹಾಗೂ ಒಬಿಸಿ ಜಾತಿಗೆ ಸೇರಿಸ ಬೇಕೆಂಬ ನಮ್ಮ ಬೇಡಿಕೆಯನ್ನು ಈಡೇರಿಸಲು ಸರ್ಕಾರ ಒಪ್ಪಿ ಪತ್ರವನ್ನು ನೀಡಿದೆ ಎಂದು ಜರಾಂಗೆ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಪ್ರಾಣಕಳೆದುಕೊಂಡ ಕುಟುಂಬ ಸದಸ್ಯರಿಗೆ ಒಂದು ವಾರದೊಳಗೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗಳನ್ನು ನೀಡುವುದಾಗಿಯೂ ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X