ಚಾಮರಾಜನಗರ | ತೆಂಗು ಬೆಳೆ ಮೌಲ್ಯವರ್ಧನೆಗೆ ತಜ್ಞರ ಚಿಂತನೆಗಳನ್ನು ಅಳವಡಿಸಿಕೊಳ್ಳಿ : ಶಿಲ್ಪಾ ನಾಗ್

Date:

Advertisements

ಚಾಮರಾಜನಗರದ ಜೆ. ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ, ತೋಟಗಾರಿಕೆ ಮಹಾವಿದ್ಯಾಲಯ ಮೈಸೂರು ಹಾಗೂ ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ಸಹಯೋಗದಲ್ಲಿ ‘ವಿಶ್ವ ತೆಂಗು ದಿನಾಚರಣೆ’ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ “ತೆಂಗು ಬೆಳೆಯಲ್ಲಿ ಪ್ರಮುಖ ಕೀಟ, ರೋಗಬಾಧೆಯ ಸಮಗ್ರ ನಿರ್ವಹಣೆ’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಆರೋಗ್ಯವರ್ಧಕವಾಗಿರುವ ತೆಂಗು ಬೆಳೆಯ ಮೌಲ್ಯವರ್ಧನೆಗೆ ತಜ್ಞರ ಚಿಂತನೆಗಳನ್ನು ರೈತರು ಅಳವಡಿಸಿಕೊಂಡು ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.

“ತೆಂಗು ಬೆಳೆ ರೈತರಿಗೆ ವರದಾನವಾಗಿದೆ. ಕೃಷಿ ಪ್ರಧಾನವಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಜತೆಯಲ್ಲಿಯೇ ತೆಂಗು ಬೆಳೆಗೂ ಪ್ರಾಮುಖ್ಯತೆ ನೀಡಲಾಗಿದೆ. ಕರ್ನಾಟಕದಲ್ಲಿ 7 ಲಕ್ಷ ಹೆಕ್ಟೇರ್ ನಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ತೆಂಗು ಬೆಳೆಯಲ್ಲಿ ದೇಶ 2ನೇ ಸ್ಥಾನ ಪಡೆದಿದೆ. ತುಮಕೂರು, ಹಾಸನ, ಚಿತ್ರದುರ್ಗ ಸೇರಿದಂತೆ ಚಾಮರಾಜನಗರ ತೆಂಗು ಬೆಳೆಯುವ ಪ್ರಮುಖ ಜಿಲ್ಲೆಗಳಾಗಿವೆ. ಜಿಲ್ಲೆಯಲ್ಲಿ ತೆಂಗು ಬೆಳೆಯ ಸಾಕಷ್ಟು ಉತ್ಪನ್ನಗಳು ಹೆಚ್ಚಾಗಿ ನೆರೆಯ ರಾಜ್ಯಗಳಿಗೆ ರಪ್ತಾಗುತ್ತಿರುವುದರಿಂದ ಆರ್ಥಿಕವಾಗಿ ಬರುವ ಲಾಭ ನೇರವಾಗಿ ನಮ್ಮ ರೈತರಿಗೆ ತಲುಪುತ್ತಿಲ್ಲ. ನಮ್ಮ ಉತ್ಪನ್ನಗಳ ಲಾಭ ನಮಗೆ ದೊರೆಯುವಂತಾಗಬೇಕು” ಎಂದರು.

“ತೆಂಗಿನ ಮರ ಕಲ್ಪವೃಕ್ಷವಾಗಿದೆ. ಯಾವುದೇ ಪೂಜೆ-ಪುನಸ್ಕಾರ, ಅಡುಗೆ-ಆಹಾರ ತಯಾರಿಕೆ ಸೇರಿದಂತೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೆಂಗು ಪ್ರಧಾನ ಸ್ಥಾನ ಪಡೆದಿದೆ ಎಂದರೆ ತಪ್ಪಾಗಲಾರದು. ತೆಂಗಿನ ಪ್ರತಿಯೊಂದು ಅಂಗವು ಬಹುಪಯೋಗಿಯಾಗಿದೆ. ಎಳನೀರು ನೈಸರ್ಗಿಕವಾಗಿ ಆರೋಗ್ಯ ವರ್ಧನೆ ಹೆಚ್ಚಿಸಲಿದೆ. ಇತ್ತೀಚೆಗೆ ಎಳನೀರಿನಿಂದ ತಯಾರಿಸಲಾಗುವ ಕೋಲ್ಡ್ ಪ್ರೆಸ್ಟ್ ಆಯಿಲ್‍ಗೆ ಸಾಕಷ್ಟು ಬೇಡಿಕೆಯಿದೆ. ಎ.ಪಿ.ಎಂ.ಸಿಯಲ್ಲಿ ಎಳನೀರು ಮಾರುಕಟ್ಟೆ ತೆರೆಯುವ ಚಿಂತನೆ ಇದೆ. ಅಡುಗೆಯಲ್ಲಿ ತೆಂಗಿನೆಣ್ಣೆ ಬಳಕೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗಲಿದೆ” ಎಂದು ತಿಳಿಸಿದರು.

ರಾಜ್ಯಸರ್ಕಾರವು ತೆಂಗು ಬೆಳೆಯುವ ರೈತರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿ ರಿಯಾಯಿತಿ ದರದಲ್ಲಿ ಸಾಲ-ಸಹಾಯಧನ ಸೌಲಭ್ಯ ನೀಡುತ್ತಿದ್ದು, ಯೋಜನೆಗಳ ಅರಿವು, ಮಾಹಿತಿ ರೈತರಿಗೆ ತಲುಪಬೇಕಿದೆ. ಇದಕ್ಕಾಗಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರ ಮಾಹಿತಿಗಾಗಿ ನಿಯೋಜಿಸಲಾಗಿರುವ ಕೃಷಿ ಸಖಿ ಹಾಗೂ ಪಶು ಸಖಿಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇತ್ತೀಚೆಗೆ ತೆಂಗು ಬೆಳೆಗೆ ಹೊಸ ಹೊಸ ರೋಗಭಾಧೆಗಳು ಕಾಡುತ್ತಿವೆ. ಕಪ್ಪುತಲೆ ಹುಳು ರೋಗದ ಕುರಿತು ಸಮೀಕ್ಷೆ ನಡೆಸಲು ಸರ್ಕಾರ ನಿರ್ದೇಶನ ನೀಡಿದೆ. ಒಟ್ಟಿನಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ತಜ್ಞರ ಮಾರ್ಗದರ್ಶನ ರೈತರಿಗೆ ಅವಶ್ಯವಾಗಿದೆ ಎಂದು ತಿಳಿಸಿದರು.

ಚಾಮರಾಜನಗರ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರಾದ ಎ. ಎಂ. ಮಹೇಶ್ ಪ್ರಭು ಅವರು ಮಾತನಾಡಿ “ವಿಶ್ವ ತೆಂಗು ದಿನಾಚರಣೆಯನ್ನು ಇಂದು ವಿಶ್ವಾದಾದ್ಯಂತ ಆಚರಿಸಲಾಗುತ್ತಿದ್ದು, ಚಾಮರಾಜನಗರವು ಸಹ ತೆಂಗು ಬೆಳೆಯುವ ಪ್ರಮುಖ ಜಿಲ್ಲೆಯಾಗಿದೆ. ಬಹುವಾರ್ಷಿಕ ಬೆಳೆಯಾಗಿರುವ ತೆಂಗು ರೈತರಿಗೆ ತಲಾತಲಾಂತರದ ವರೆಗೆ ಆದಾಯ ತರಲಿದೆ. ತೆಂಗಿನಿಂದ 130 ಬಗೆಯ ಉತ್ಪನ್ನಗಳನ್ನು ತಯಾರಿಸಬಹುದಾಗಿದೆ. ಸಹಕಾರಿ ಸಂಸ್ಥೆಗಳ ಮೂಲಕ ತೆಂಗು ಮಾರಾಟಕ್ಕೆ ಮೌಲ್ಯವರ್ಧನೆ ದೊರಕಿಸಿ ಸುಸ್ಥಿರ ಅಭಿವೃದ್ಧಿಗೆ ಯೋಜಿಸಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿಗರೇ ಧರ್ಮದ ಹೆಸರಿನಲ್ಲಿ ಕೀಳುಮಟ್ಟದ ರಾಜಕೀಯ ಮಾಡಬೇಡಿ : ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ರೈತ ಮುಖಂಡರಾದ ಹಳ್ಳಿಕೆರೆಹುಂಡಿ ಭಾಗ್ಯರಾಜ್, ಮಹೇಶ್ ಕುಮಾರ್ ಹಾಗೂ ತಾಲೂಕು ತೆಂಗು ಬೆಳೆಗಾರರ ಸಂಸ್ಕರಣೆ ಘಟಕದ ನಿರ್ದೇಶಕ ಪುಟ್ಟರಸು, ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ರೋಗಶಾಸ್ತ್ರಜ್ಞ ಪಂಪನಗೌಡ ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X