ಕೊಪ್ಪಳ | ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಆಹಾರ ಧಾನ್ಯ ಪಡಿತರಕ್ಕೆ ಒತ್ತಾಯ

Date:

Advertisements

ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಸವೇಶ್ವರ ಸರ್ಕಲ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿದರು.

ತಾಲೂಕು ಕಾರ್ಯಕರ್ತೆ ವಿರುಪಮಾ ದೋಟಿಹಾಳ‌ ಮಾತನಾಡಿ, “ಸರ್ಕಾರ ಗ್ಯಾರಂಟಿ ಯೋಜನೆ ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ನೀಡಬೇಕಾಗಿದ್ದ ಅಕ್ಕಿಯ ಬದಲಾಗಿ 5 ಕೆಜಿ ಅಕ್ಕಿ, ಉಳಿದ 5 ಕೆಜಿಯ ಅಕ್ಕಿಯ ಹಣವನ್ನು ಖಾತೆಗೆ ಜಮಾ ಮಾಡುತ್ತಿದ್ದಾರೆ. ಹಣದ ಬದಲು ದಿನನಿತ್ಯ ಬಳಕೆಯಾಗುವ ಎಣ್ಣೆ, ಜೋಳ, ರಾಗಿ, ಸಕ್ಕರೆ ವಿತರಣೆ ಮಾಡಬೇಕು” ಎಂದು ಒತ್ತಾಯಿಸಿದರು.

“ಕೆಲವು ಕುಟುಂಬದಲ್ಲಿ ಮಹಿಳೆಯರ ಕೈಗೆ ಹಣ ಸಿಗುತ್ತದೆ. ಅವರು ದಿನನಿತ್ಯದ ಆಹಾರ ಭದ್ರತೆಗೆ ಬಳಸಿ ಕೊಳ್ಳುತ್ತಾರೆ. ಆದರೆ, ಕೆಲವು ಮನೆಯಲ್ಲಿ ಗಂಡಸರು ತಮ್ಮ ದುಶ್ಚಟಗಳಿಗೆ ಬಳಸಿ ಕೊಳ್ಳುತ್ತಾರೆ. ಆಗ ಅಪೌಷ್ಠಿಕತೆ ಹೆಚ್ಚಾಗುತ್ತದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಪಡಿತರದಲ್ಲಿ ಸ್ಥಳೀಯ ಆಹಾರ ಧಾನ್ಯ ವಿತರಿಸುವಂತೆ ಗ್ರಾಕೂಸ ಆಗ್ರಹ

“ಕೂಲಿ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮಾಡಬೇಕು. ಇದರಿಂದ ದೊರೆಯುವ ಸೌಲಭ್ಯಗಳಿಂದ ಅನುಕೂಲವಾಗುತ್ತದೆ. ನಿತ್ಯವೂ ದುಡಿದು ತಿನ್ನುವ ಸಮಯದಲ್ಲಿ ಮಕ್ಕಳ ವಿದ್ಯಾಭ್ಯಾಸ, ಮದುವೆಗೆ ಸೇರಿದಂತೆ ಸರ್ಕಾರದಿಂದ ಸಾಕಷ್ಟು ಯೋಜನೆಗಳು ದೊರೆಯುತ್ತವೆ. ಇದರಿಂದ ಕೂಲಿಕಾರರಿಗೆ ಅನುಕೂಲವಾಗುತ್ತದೆ” ಎಂದು ಒತ್ತಾಯಿಸಿದರು.

ಈ ಹೋರಾಟದಲ್ಲಿ ಬಸವರಾಜ ರಾಯಚೂರು, ಭಾರತಿ ಬಾದಿಮನಾಳ, ಜಿ ಎಸ್ ಶರಣು, ನೇತ್ರಾ ಕ್ಯಾದಗುಪ್ಪ, ಕೆಂಚಮ್ಮ ಮಹಾದೇವಿ, ಚಂದಾಲಿಂಗಪ್ಪ ಕಲಾಲ್ ಬಂಡಿ ಸೇರಿದಂತೆ ನೂರಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಬೆಂಬಲಿಗರು ಮತ್ತು ಕುಷ್ಟಗಿ ತಾಲೂಕಿನ ಕೂಲಿ ಕಾರ್ಮಿಕ ಸದಸ್ಯರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X