ಕೊಪ್ಪಳ | ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

Date:

Advertisements

ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಬಾಣಂತಿ ತಾಯಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಹಿರೇವಕ್ಕಲಕುಂಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಮಲ್ಲಮ್ಮ ಕಲ್ಲೂರ್ (23) ಮೃತರು. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಈ ಘಟನೆ ನಡೆದಿದ್ದು, ಅನಸ್ತೇಶಿಯಾ ನೀಡದೆ ವೈದ್ಯರು ಚಿಕಿತ್ಸೆ ಮಾಡಿದ್ದಾರೆ. ಇದರಿಂದ ಮಹಿಳೆ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸಂತಾನಹರಣ ಚಿಕಿತ್ಸೆಗೆಂದು ಹಿರೇವಕ್ಕಲಕುಂಟ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಲ್ಲಮ್ಮ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಮಹಿಳೆ ಸ್ಥಿತಿ ಗಂಭೀರವಾದಾಗ ಆರೋಗ್ಯ ಕೇಂದ್ರದ ವೈದ್ಯರು ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯದಲ್ಲೇ ಮಲ್ಲಮ್ಮ ಸಾವನ್ನಪ್ಪಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಎಚ್‌ಒ ಡಾ.ಲಿಂಗರಾಜ ಮತ್ತು ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ಡಾ.ಈಶ್ವರ ಸವದಿ ಇವರನ್ನು ಮೃತ ಮಲ್ಲಮ್ಮಳ ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಗಣೇಶ ವಿಸರ್ಜನೆ ದಿನ ಡಿಜೆ ಬಳಕೆ; ಸಾರ್ವಜನಿಕರ ಆಕ್ರೋಶ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X