ಸಾಹಿತಿ ಬಾನು ಮುಷ್ತಾಕ್ ಅವರು ಭುವನೇಶ್ವರಿ ಕುರಿತು ಮಾತನಾಡಿ ಹಿಂದು ಸಂಪ್ರದಾಯಕ್ಕೆ ಅವಮಾನ ಮಾಡಿದ್ದಾರೆಂಬ ಕಾರಣಕ್ಕೆ, ಅವರು ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಬೇಕೆಂದು ರಾಷ್ಟ್ರ ರಕ್ಷಣಾ ಸೇನೆ ಕಾರ್ಯಕರ್ತರು ಮನವಿ ನೀಡಿದ್ದಾರೆ.
ಬಾನು ಮುಷ್ತಾಕ್ ಅವರ ಮನೆಗೆ ಭೇಟಿ ನೀಡಿದ ಸಂಘದ ಪದಾಧಿಕಾರಿಗಳು, ನೀವು ಭುವನೇಶ್ವರಿ ಕುರಿತು ಮಾತನಾಡಿದ್ದು ಖಂಡನೀಯ. ಆದ್ದರಿಂದ ಕನ್ನಡಿಗರಿಗೆ ಅವಮಾನವಾಗಿದೆ. ಆ ಹಿನ್ನೆಲೆಯಲ್ಲಿ ದಸರಾ ಉದ್ಘಾಟನೆಯನ್ನು ತಿರಸ್ಕರಿಸಿ ಎಂದು ಮನವಿ ಮಾಡಿದ್ದಾರೆ.
ದಸರಾ ನಾಡಹಬ್ಬವಾದರು ಅದು ನಮ್ಮ ಹಿಂದೂ ಸಂಪ್ರದಾಯದ ಹಬ್ಬ. ಹಾಗಾಗಿ ನಮ್ಮ ಸಂಸ್ಕೃತಿ ಒಪ್ಪದ ನೀವು ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಿರಿ. ನೀವು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ಆದರೆ ದಸರಾ ಉದ್ಘಾಟನೆಯಿಂದ ಹಿಂದೆ ಸರಿಯಿರಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ