ಯಾವ ಪಕ್ಷದಿಂದ ಸ್ಪರ್ಧಿಸಿದರೂ ಗೆಲುತ್ತೇನೆ: ಕೆ ಎನ್ ರಾಜಣ್ಣ

Date:

Advertisements

ಯಾವ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದರೂ ಗೆಲುವು ಸಾಧಿಸುತ್ತೇನೆ. ಪಕ್ಷೇತರನಾಗಿ ನಿಂತರೂ ಗೆಲ್ಲುತ್ತೇನೆ ಎಂದು ಶಾಸಕ ಕೆ ಎನ್ ರಾಜಣ್ಣ ಇಲ್ಲಿ ಬುಧವಾರ ಹೇಳಿದರು.

ಸಚಿವ ಸ್ಥಾನದಿಂದ ವಜಾಗೊಂಡ ನಂತರ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳ ನಡುವೆ ರಾಜಣ್ಣ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. ‘ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ಕಳೆದ ವಿಧಾನಸಭೆ ಚುನಾವಣೆಯ ನಂತರ ಹೇಳುತ್ತಲೇ ಬಂದಿದ್ದಾರೆ. ಈಗ ಸ್ಪರ್ಧಿಸುವ ಮಾತುಗಳನ್ನಾಡಿದ್ದಾರೆ.

ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಮಾತನಾಡಿ, ‘ನಾನೇಕೆ ಬಿಜೆಪಿ ಸೇರಲಿ’ ಎಂದು ಪ್ರಶ್ನಿಸಿದರು. ‘ಬಿಜೆಪಿ ಸೇರುವವರು ಸೇರುತ್ತಾರೆ. ನಾನು ಯಾವ ಪಕ್ಷದಿಂದ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ಇದೆ. ನಾನೇಕೆ ಪಕ್ಷ ಬಿಡಬೇಕು. ಪಕ್ಷ ನನಗೆ ಏನು ತೊಂದರೆ ಮಾಡಿದೆ? ಪ್ರತಿ ಕ್ಷೇತ್ರದಲ್ಲೂ ಯಾರನ್ನಾದರೂ ಗೆಲ್ಲಿಸುವ, ಸೋಲಿಸುವ ಶಕ್ತಿ ನನಗಿದೆ’ ಎಂದು ಗುಡುಗಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷವನ್ನು ಪ್ರೀತಿಯಿಂದ ಗೆಲ್ಲಬೇಕೆಂದ ಉಮರ್ ಪರಮ ಪಾತಕಿಯೇ?

‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವ ತನಕ ಹಾಗೂ ಪಕ್ಷದ ನೇತೃತ್ವ ವಹಿಸಿಕೊಂಡಿರುವ ವರೆಗೆ ನನ್ನ ಭವಿಷ್ಯಕ್ಕೆ ಯಾವುದೇ ತೊಂದರೆ ಇಲ್ಲ. ಅವರು ಪಕ್ಷದಲ್ಲಿ ಇರುವವರೆಗೂ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋಗುತ್ತೇನೆ’ ಎಂದು ತಿಳಿಸಿದರು.

‘ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ. ರಾಹುಲ್ ಗಾಂಧಿ ನಡೆಸುತ್ತಿರುವ ಮತ ಕಳ್ಳತನ ಹೋರಾಟ ಬೆಂಬಲಿಸುತ್ತೇನೆ. ನನ್ನನ್ನು ಮತ್ತೆ ಸಚಿವರನ್ನಾಗಿ ಮಾಡುವಂತೆ ಒತ್ತಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ದೆಹಲಿಗೆ ಹೋಗುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ’ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X