ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗ, ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆ ಆರಂಭ

Date:

Advertisements

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸ್ಪೆಷಾಲಿಟಿ ವಿಭಾಗಗಳು ಮತ್ತು ಆಸ್ಪತ್ರೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಕಟ್ಟಡದಲ್ಲಿ ಹೃದ್ರೋಗ ವಿಭಾಗವು ಮತ್ತು ನರರೋಗ ವಿಭಾಗವು ಕಾರ್ಯ ನಿರ್ವಹಿಸುತ್ತಿದ್ದು ಜನರಿಗೆ ಅತ್ಯುತ್ತಮ ಸೇವೆಯನ್ನು ನಿಡಲಾಗುತ್ತಿದ್ದು. ಪ್ರಸ್ತುತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಚ್ಚಿನ ವಿಭಾಗಗಳ ಸೇವೆಯನ್ನು ವಿಸ್ತರಿಸುವ ದೃಷ್ಟಿಯಿಂದಈ ಕೆಳಕಂಡ ಸೂಪರ್ ಸ್ಪೆಷಾಲಿಟಿ ಸೇವೆಗಳು ಸಾರ್ವಜನಿಕರಿಗೆ ಇನ್ನು ಮುಂದೆ ಲಭ್ಯವಾಗುತ್ತಿವೆ.

ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸೆ (Pediatric) ಮೂತ್ರರೋಗ ಶಸ್ತ್ರ ಚಿಕಿತ್ಸೆ,ಕಿಡ್ನಿ ಖಾಯಿಲೆ (nephrology) ಸೇವೆಗಳು ದಿನಾಂಕ: 04/09/2025 ರಿಂದ ಕಾರ್ಯರಂಭಗೊಳ್ಳಲಿದ್ದು, ಮೂತ್ರರೋಗ ಶಸ್ತ್ರ ಚಿಕಿತ್ಸೆ, ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ಮೂತ್ರಪಿಂಡ ಸರ್ಜರಿ, ಮಕ್ಕಳ ಶಸ್ತ್ರಚಿಕಿತ್ಸಾ ತಜ್ಞರ ಸೇವೆಗಳು ಸೋಮವಾರ ಮತ್ತು ಗುರುವಾರ ದೊರೆಯಲಿದೆ.

ನರರೋಗ ವಿಭಾಗವು ಸೋಮವಾರ, ಬುದುವಾರ, ಶುಕ್ರವಾರದಂದುನರರೋಗ ಶಸ್ತ್ರಚಿಕಿತ್ಸಾ ಸೇವೆಯು ಮಂಗಳವಾರ, ಗುರುವಾರ, ಶನಿವಾರದಂದು ಹೋರರೋಗಿಗಳ ಸೇವೆ ಲಭ್ಯವಿರುತ್ತದೆ.ಚಿಕಿತ್ಸೆಯ ನಂತರ ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ರೋಗಿಗಳನ್ನು ದಾಖಲಿಸಿಕೊಂಡು ಬಿ.ಪಿ.ಎಲ್ ಕಾರ್ಡ್‌ದಾರರಿಗೆ ಎ.ಬಿ.ಎ.ಆರ್.ಕೆ ಅಡಿಯಲ್ಲಿ ಉಚಿತ ಸೌಲಭ್ಯ ದೊರೆಯಲಿದೆ.

ಸೂಪರ್ ಸ್ಪೆಷಾಲಿಟಿ ವಿಭಾಗದಲ್ಲಿ ವಾರ್ಡ್‌ಗಳನ್ನು ಪ್ರಾರಂಭಿಸಲಾಗಿದ್ದು ರೋಗಿಗಳು ಈ ಹೆಚ್ಚಿನ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಂಸ್ಥೆಯ ಆಡಳಿತ ಮಂಡಳಿ ಪ್ರಕಟ ಪಡಿಸಿದೆ.

ಬೆಂಗಳೂರು, ಮೈಸೂರು, ಹುಬ್ಬಳ್ಳಿ ನಗರಗಳ ನಂತರ ಹೆಚ್ಚುವರಿ ಸೂಪರ್ ಸ್ಪೆಷಾಲಿಟಿ ಸೇವೆಯನ್ನು ಒದಗಿಸುವ ಸಂಸ್ಥೆಗಳ ಪಟ್ಟಿಗೆ ಶಿವಮೊಗ್ಗ ವೈದ್ಯಕೀಯ ಸಂಸ್ಥೆ ಸೇರ್ಪಡೆಯಾಗಿರುವುದು, ಸಂಸ್ಥೆಗೆ ಸಂತಸದ ಸುದ್ದಿಯಾಗಿದೆ ಎಂದು ಮೆಗ್ಗಾನ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X