ಪರಿಶಿಷ್ಟ ಜಾತಿ ಮೀಸಲಾತಿ ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಆದೇಶ

Date:

Advertisements

ನಾಗರಿಕ ಸೇವೆಗಳಲ್ಲಿ ನೇರ ನೇಮಕಾತಿ ಪ್ರಕ್ರಿಯೆ ಸಂಬಂಧ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾಗಿದ್ದ ಮೀಸಲಾತಿಯನ್ನು ಪುನರ್ ವರ್ಗೀಕರಿಸಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.

ಈ ಹಿಂದೆ ಒಟ್ಟಾರೆಯಾಗಿ ಶೇಕಡ 17ರಷ್ಟು ಮೀಸಲಾತಿ ಹೊಂದಿದ್ದ ಪರಿಶಿಷ್ಟ ಜಾತಿ(ಎಸ್‍ಸಿ)ಗಳನ್ನು ಈಗ ಮೂರು ಪ್ರವರ್ಗಗಳಾಗಿ ವಿಂಗಡಿಸಿ, ಅವುಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ನಿಗದಿಪಡಿಸಿದೆ.

ಈ ಹೊಸ ಆದೇಶದ ಪ್ರಕಾರ, ಪರಿಶಿಷ್ಟ ಜಾತಿಗಳಲ್ಲಿನ 101 ಜಾತಿಗಳನ್ನು ಮೂರು ಪ್ರವರ್ಗಗಳಾಗಿ ವಿಂಗಡಿಸಲಾಗಿದ್ದು, ಪ್ರವರ್ಗ-‘ಎ’: ಈ ಪ್ರವರ್ಗಕ್ಕೆ ಶೇಕಡ 6ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಪ್ರವರ್ಗ-‘ಬಿ’: ಈ ಪ್ರವರ್ಗಕ್ಕೆ ಶೇಕಡ 6ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಪ್ರವರ್ಗ-‘ಸಿ’: ಈ ಪ್ರವರ್ಗಕ್ಕೆ ಶೇಕಡ 5ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷವನ್ನು ಪ್ರೀತಿಯಿಂದ ಗೆಲ್ಲಬೇಕೆಂದ ಉಮರ್ ಪರಮ ಪಾತಕಿಯೇ?

ಅದರಂತೆ ಈ ಆದೇಶವು ಈಗಾಗಲೇ ಜಾರಿಯಲ್ಲಿದ್ದ 100-ಪಾಯಿಂಟ್ ರೋಸ್ಟರ್‍ನಲ್ಲಿ ಪರಿಶಿಷ್ಟ ಜಾತಿಗಳಿಗೆ ಗುರುತಿಸಲಾಗಿದ್ದ 17 ರೋಸ್ಟರ್ ಪಾಯಿಂಟ್‍ಗಳನ್ನು ಮಾತ್ರ ಪುನರ್ ವರ್ಗೀಕರಿಸಿದೆ. ಈ ಹೊಸ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಆದೇಶದ ಹಿನ್ನೆಲೆಯಲ್ಲಿ, ಈಗಾಗಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿರುವ ಇಲಾಖೆಗಳು, ಈ ಹಿಂದೆ ಯಾವ ರೋಸ್ಟರ್ ಪಾಯಿಂಟ್‍ವರೆಗೆ ಭರ್ತಿ ಮಾಡಿರುತ್ತಾರೋ, ಅದರ ನಂತರದ ಪಾಯಿಂಟ್‍ಗಳಿಂದ ಈ ಹೊಸ ಆದೇಶದ ಪ್ರಕಾರ ನೇಮಕಾತಿಯನ್ನು ಮುಂದುವರಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.ಉಳಿದಂತೆ, 2022 ಡಿಸೆಂಬರ್ 28ರ ಹಿಂದಿನ ಸರಕಾರಿ ಆದೇಶದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದೂ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

Download Eedina App Android / iOS

X