ಹಿಂದೂ ಮುಸ್ಲಿಂರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾದ ಮಹಾಗಂಧೋತ್ಸವ ಇದೇ ಸೆಪ್ಟೆಂಬರ್ 4 (ಗುರುವಾರ) ರಿಂದ 6ರವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲಿರುವ ಹಿನ್ನೆಲೆ ದರ್ಗಾದ ಆಡಳಿತ ಮಂಡಳಿ ವತಿಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ.
ಉರುಸ್ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇರುವ ಕಾರಣ ವಕ್ಫ್ ಬೋರ್ಡ್ ನಿಂದ ನೀರಿನ ವ್ಯವಸ್ಥೆ, ಸ್ವಚ್ಛತೆ, ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ, ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಭಕ್ತಾದಿಗಳಿಗೆ ಕಲ್ಪಿಸಲು ವಕ್ಫ್ ಬೋರ್ಡ್ ಅಧಿಕಾರಿಗಳು ಸಿಬ್ಬಂದಿ, ದರ್ಗಾ ಕಮಿಟಿ, ಊರಿನ ಹಿಂದೂ ಮುಸ್ಲಿಂ ಬಾಂಧವರು, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಬೆಸ್ಕಾಂ ಇಲಾಖೆ, ಕಂದಾಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿವೆ.
ಇಂದು ಹಜರತ್ ಗೌಸ್ ಪಾಕ್ ರವರ ಧ್ವಜ ಹಾರಿಸುವ ಕಾರ್ಯಕ್ರಮ, 5 ರಂದು ಊರಿನ ಗಂಧೋತ್ಸವ ಹಾಗೂ 6ರ ಶನಿವಾರ ವಕ್ಫ್ ಬೋರ್ಡ್ ವತಿಯಿಂದ ಗಂಧೋತ್ಸವ ಹಾಗೂ ರಾತ್ರಿ 10 ಗಂಟೆಗೆ ಕವಾಲಿ ಕಾರ್ಯಕ್ರಮ ನಡೆಯಲಿದ್ದು, ಈ ಮೂರು ದಿನಗಳ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಅಮ್ಮಾಜಾನ್ ಬಾವಾಜಾನ್ ರವರ ಕೃಪೆಗೆ ಪಾತ್ರರಾಗಬೇಕೆಂದು ವಕ್ಫ್ ಸಂಸ್ಥೆ ಮನವಿ ಮಾಡಿದೆ.
ಇದನ್ನೂ ಓದಿ: ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!